ನವದೆಹಲಿ:ಆರ್ಥಿಕತೆ, ನಿರುದ್ಯೋಗಗಳಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಸದಾ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ನಿನ್ನೆ ದೆಹಲಿಯ ಚುನಾವಣಾ ಪ್ರಚಾರದಲ್ಲಿ ತುಸು ಜಾಸ್ತಿ ಎನ್ನಿಸುವಷ್ಟು ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಯುವಜನರು ಕೆಲಸವಿಲ್ಲದೆ ಕಂಗಾಲಾಗುತ್ತಿದ್ದಾರೆ. ಹೀಗೆ ಆದರೆ ಆ ಯುವಜನರೇ ಬಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೋಲಿನಿಂದ ಹೊಡೆಯುತ್ತಾರೆ ಎಂದು ಹೇಳಿದ್ದಾರೆ.ಪ್ರಧಾನಮಂತ್ರಿಗಳು ಈಗ ಎಲ್ಲ ಕಡೆ ಹೋಗಿ ಭಾಷಣ ಮಾಡುತ್ತಿದ್ದಾರೆ. ಆದರೆ ಇನ್ನೊಂದು ಆರು ತಿಂಗಳು ಕಳೆಯಲಿ. ಅವರಿಗೆ ಮನೆಯಿಂದ ಹೊರಗೆ ಬರಲೂ ಸಾಧ್ಯವಾಗುವುದಿಲ್ಲ.
ಹೊರಗೆ ಬಂದರೆ ದೇಶದ ಯುವಕರೇ ಅವರಿಗೆ ಹೊಡೆಯುತ್ತಾರೆ. ಅಷ್ಟೇ ಅಲ್ಲ ಯುವಕರಿಗೆ ಕೆಲಸ ಕೊಡದ ವಿನಃ ಈ ದೇಶ ಅಭಿವೃದ್ಧಿ ಹೊಂದುವುದಿಲ್ಲ ಎಂಬುದನ್ನು ಪ್ರಧಾನಿಗೆ ಅರ್ಥ ಮಾಡಿಸುತ್ತಾರೆ ಎಂದು ಹೇಳಿದ್ದಾರೆ.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಳೆದ 45 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿ ಇದೆ. ಆದರೆ ಈ ಬಾರಿಯ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅದರ ಬಗ್ಗೆ ಪ್ರಸ್ತಾಪವನ್ನೇ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ನರೇಂದ್ರ ಮೋದಿಯವರಂತೂ ಮಾತೇ ಆಡುತ್ತಿಲ್ಲ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 12 =
Remember me
