ನವದೆಹಲಿ: ಭಾರತದ ಮುಂಬರುವ ಮಹಾತ್ವಾಕಾಂಕ್ಷಿ ಯೋಜನೆ ಮೊದಲ ಮಾನವ ಸಹಿತ ಗಗನಯಾನಕ್ಕೆ ಆಯ್ಕೆಯಾದ ನಾಲ್ವರು ಗಗನಯಾತ್ರಿಗಳು ರಷ್ಯಾದಲ್ಲಿ 11 ತಿಂಗಳು ತರಬೇತಿ ಪಡೆಯಲಿದ್ದಾರೆ ಎಂದು ಕೇಂದ್ರ ಪರಮಾಣು ಶಕ್ತಿ ಮತ್ತು ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್​ ತಿಳಿಸಿದ್ದಾರೆ.
ಗಗನಯಾತ್ರಿಗಳ ತರಬೇತಿ ಜನವರಿ ಮೂರನೇ ವಾರದಿಂದ ಪ್ರಾರಂಭವಾಗಲಿದೆ.ರಷ್ಯಾದಲ್ಲಿ 11 ತಿಂಗಳು ತರಬೇತಿ ಪಡೆದ ಬಳಿಕ ಗಗನಯಾತ್ರಿಗಳು ಭಾರತದಲ್ಲಿ ನಿರ್ದಿಷ್ಟ ಹಂತದ ತರಬೇತಿ ಪಡೆಯುತ್ತಾರೆ. ಇಸ್ರೋದಿಂದ ವಿನ್ಯಾಸಗೊಳಿಸಲಾದ ಗಗನನೌಕೆಯಲ್ಲಿ ತರಬೇತಿ ನೀಡಲಾಗುತ್ತದೆ. ಅದನ್ನು ಹೇಗೆ ನಿರ್ವಹಸಿಬೇಕು ಎಂದು ಅವರಿಗೆ ಹೇಳಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸುಮಾರು 10,000 ಕೋಟಿ ರೂಪಾಯಿ ವೆಚ್ಚದ ಈ ಗಗನಯಾನ ಯೋಜನೆಯನ್ನು 2022ರಲ್ಲಿ ಲಾಂಚ್​ ಮಾಡಲು ಇಸ್ರೋ ಸಿದ್ಧವಾಗುತ್ತಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − three =
Remember me
