ಪಟನಾ:ಅತ್ತೆ ಮಗನ ಮದುವೆಗೆಂದು ಅತ್ತೆ ಮನಗೆ ಬಂದ ಯುವಕ ಮಸಣ ಸೇರಿರುವ ಘಟನೆ ಬಿಹಾರದ ಸುಗೌಲಿಯ ಶ್ರೀರಾಮ್​ಪುರದಲ್ಲಿ ನಡೆದಿದೆ. ಸರ್ಕಾರಿ ಶಾಲೆಯಲ್ಲಿ ಯುವಕನ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಸಾರಿಗೆ, ಸರ್ಕಾರದ ಹಗ್ಗಜಗ್ಗಾಟಕ್ಕೆ ಜನ ಹೈರಾಣ, ಸೋಮವಾರವೂ ಬಸವಳಿದ ಪ್ರಯಾಣಿಕರು, ಖಾಸಗಿ ಬಸ್‌ಗಳಲ್ಲಿ ಪ್ರಯಾಣ
ನೂತಾನ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ಯುವಕ ಡಿಸೆಂಬರ್​ 11ರಂದು ಶ್ರೀರಾಮ್​ಪುರಕ್ಕೆ ಬಂದಿದ್ದ. ಅದೇ ದಿನ ಮದುವೆ ನಡೆದಿದ್ದು, ಅದಾದ ನಂತರ ಯುವಕ ಅದೇ ಮನೆಯಲ್ಲಿ ತಂಗಿದ್ದ. ಆದರೆ ಸೋಮವಾರ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾನೆ. ಮನೆಯಲ್ಲಿ ಎಲ್ಲಿಯೂ ಸಿಗದಿದ್ದಾಗ, ಊರಲ್ಲೆಲ್ಲ ಹುಡುಕಾಡಲಾಗಿದೆ.
ಇದನ್ನೂ ಓದಿ:ಚುನಾವಣೆ ಗಂಭೀರತೆ ಅರಿವಿರಬೇಕು, ಜಿಲ್ಲಾಧಿಕಾರಿ ರವೀಂದ್ರ ಸೂಚನೆ, ಗ್ರಾಪಂ ಚುನಾವಣೆ ಪೂರ್ವಭಾವಿ ಸಿದ್ಧತಾ ಸಭೆ
ಆಗ ಯುವಕ ಸರ್ಕಾರಿ ಶಾಲಾ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗ್ರಾಮಸ್ಥರು ಬಂದು ತಿಳಿಸಿದ್ದಾರೆ. ಈ ವಿಚಾರವಾಗಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ, ಪೊಲೀಸರು ಬಂದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮದುವೆಗೆ ಬಂದವನು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎನ್ನುವುದು ತನಿಖೆಯಿಂದ ಹೊರಬರಬೇಕಿದೆ. (ಏಜೆನ್ಸೀಸ್​)
https://www.vijayavani.net/bride-leaves-from-marriage-hall/
ಕಿರಿ ಸೊಸೆ ಜತೆ ಮಾವನ ಅಕ್ರಮ ಸಂಬಂಧ; ವಿಚಾರ ತಿಳಿದ ಹಿರಿ ಸೊಸೆ, ಅತ್ತೆ ಮಾಡಿದ್ದೇನು ಗೊತ್ತಾ?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two × two =
Remember me
