ಬೆಳಗಾವಿ:ದೇಶದ ಮೊಟ್ಟಮೊದಲ ಕಿಸಾನ್ ರೈಲು ಸಂಚಾರಕ್ಕೆ ಇಂದು (ಶುಕ್ರವಾರ) ಚಾಲನೆ ನೀಡಲಾಗಿದ್ದು, ಕೃಷಿ ಉತ್ಪನ್ನಗಳ ಸಾಗಾಟಕ್ಕೆ ರೈಲ್ವೆ ಸೇವೆ ತೆರೆದುಕೊಂಡಿದೆ.
ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವರ್ಚುವಲ್ ವೇದಿಕೆ ಮೂಲಕ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ ಇಲಾಖೆ ಸಚಿವ ಪಿಯುಷ್ ಗೋಯಲ್​, ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹಸಿರುನಿಶಾನೆ ತೋರಿದರು.
ಇದನ್ನೂ ಓದಿರಿಆ.10ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ
ಪ್ರಧಾನ ಮಂತ್ರಿಗಳ ಆಶಯದಂತೆ ರೈತರ ಆದಾಯ ದ್ವಿಗುಣಗೊಳಿಸಲು ಕಿಸಾನ್ ರೈಲು ಸಹಕಾರಿಯಾಗಲಿದೆ. ರೈತರ ಅಭಿವೃದ್ಧಿಗಾಗಿ ರೈಲ್ವೆ ಇಲಾಖೆ ಕೈಜೋಡಿಸಿದೆ ಎಂದು‌ ಕೇಂದ್ರ ಕೃಷಿ ಸಚಿವ ತೋಮರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಮೊದಲ ಕಿಸಾನ್ ರೈಲು ಪೈಲಟ್ ಯೋಜನೆಯಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಿಸಾನ್ ರೈಲು ಮೂಲಕ ಎಲ್ಲೆಡೆ ಕೃಷಿ ಉತ್ಪನ್ನಗಳನ್ನು ತಲುಪಿಸುವುದು ನಮ್ಮ ಆಶಯ ಎಂದು ಸಚಿವ ಪಿಯುಷ್ ಗೋಯಲ್ ತಿಳಿಸಿದರು.
ಪ್ರತಿ ಭಾನುವಾರ ಸಂಚರಿಸುವ ಈ ಕಿಸಾನ್​ ರೈಲು, ರೈತರ ಅಭಿವೃದ್ಧಿಗೆ ಹೊಸ ಭಾಷ್ಯ ಬರೆಯಲಿದೆ ಎಂದ ಸುರೇಶ್ ಅಂಗಡಿ, ರಾಜ್ಯ ಸರ್ಕಾರ ಪ್ರಸ್ತಾವ ಸಲ್ಲಿಸಿದರೆ ಇಲ್ಲಿಂದಲೂ ಕಿಸಾನ್ ರೈಲು ಆರಂಭಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ನಾಸಿಕ ಜಿಲ್ಲಾ ಉಸ್ತುವಾರಿ ಸಚಿವ ಛಗಬ್ ಭುಜಬಲ್, ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಮಿತ್ತಲ್ ಉಪಸ್ಥಿತರಿದ್ದರು.
ದೇವಸ್ಥಾನದ ನಿಧಿ ದೋಚಲು ಬಂದವ ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
