ಹೈದರಾಬಾದ್​:‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ವ್ಯಾಕ್ಸಿನ್ ವಾರ್’ ಮೂಲಕ ಹಿಂದಿಯಲ್ಲಿ ಖ್ಯಾತಿ ಗಳಿಸಿದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರ ಹೈದರಾಬಾದ್‌ನ ಕಚೇರಿ ಮತ್ತು ಮನೆಯಲ್ಲಿ ಐಟಿ ಅಧಿಕಾರಿಗಳು ಬುಧವಾರ ಶೋಧ ನಡೆಸಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ವಿಮರ್ಶೆ ಎಂಬ ಬಾಂಬ್​ ಸಿನಿರಂಗವನ್ನು ನಾಶ ಮಾಡಬಾರದು: ವ್ಲಾಗರ್​ಗಳಿಗೆ ಹೈಕೋರ್ಟ್​ ಖಡಕ್​ ಎಚ್ಚರಿಕೆ
ರವಿತೇಜಾ ಅಭಿನಯದ ಮುಂಬರುವ ತೆಲುಗು ಚಿತ್ರ ‘ಟೈಗರ್ ನಾಗೇಶ್ವರ ರಾವ್’ ಬಿಡುಗಡೆಗೆ ಸಿದ್ಧರಾಗಿದೆ. ಚಿತ್ರದ ಪ್ರಚಾರಕ್ಕಾಗಿ ಮಾಧ್ಯಮದವರನ್ನು ಭೇಟಿ ಮಾಡಲು ಸಜ್ಜಾಗುತ್ತಿದ್ದ ಸಮಯದಲ್ಲಿ ಈ ದಾಳಿ ನಡೆದಿದ್ದು, ಚಿನಿ ಉದ್ಯಮದಲ್ಲಿ ಸಂಚಲನ ಮೂಡಿಸಿದೆ.
ಅವರ ತೆಲುಗು ಚಿತ್ರ “ಟೈಗರ್ ನಾಗೇಶ್ವರ ರಾವ್”ನಲ್ಲಿ ಮಾಸ್​ ಮಹಾರಾಜ ರವಿತೇಜ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಿಸಲಾಗಿದೆ. ತೆಲುಗು, ಕನ್ನಡ, ತಮಿಳು, ಮಲೆಯಾಳಂ ಮತ್ತು ಹಿಂದಿಯಲ್ಲಿ ಈ ತಿಂಗಳ 20ರಂದು ಬಿಡುಗಡೆಯಾಗಲಿದೆ. ಹೀಗಾಗಿಯೇ ಬೃಹತ್​ ಮೊತ್ತದ ಹಣವು ಕೇಂದ್ರ ಏಜೆನ್ಸಿಗಳ ಗಮನವನ್ನು ಸೆಳೆದಿರಬಹುದು ಎಂದು ಹೇಳಲಾಗುತ್ತಿದೆ.
ಇನ್ನು ಅಭಿಷೇಕ್​ ಅಗರ್ವಾಲ್​ ಕಳೆದ ವರ್ಷ ದ ಕಾಶ್ಮೀರ್ ಫೈಲ್ಸ್​, ಕಾರ್ತೀಕೇಯ-2, ಧಮಾಕ ದಂಥ ಸಿನಿಮಾಗಳನ್ನು ನಿರ್ಮಿಸಿದ್ದರು. ಮೂಲಗಳ ಪ್ರಕಾರ, ಆದಾಯ ತೆರಿಗೆ ಮತ್ತು ಜಿಎಸ್‌ಟಿ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
