ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್​ ಷಾ ಇಂದು ಶಾಹೀನ್​ ಬಾಗ್​ ಪ್ರತಿಭಟನಾಕಾರರನ್ನು ಭೇಟಿ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಇಂತಹ ಯಾವುದೇ ಭೇಟಿ ನಡೆಯುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದೆ.
ನಿನ್ನೆ(ಫೆ.15) ಶಾಹೀನ್​ಬಾಗ್​ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಆಸಿಫ್​ ತೂಫಾನಿ ಹೆಸರಿನ ಮಹಿಳೆ ತಾನು ಮತ್ತು ಇನ್ನೊಬ್ಬ ಮಹಿಳೆ ಇಂದು ಅಮಿತ್​ ಷಾರನ್ನು ಭೇಟಿ ಮಾಡುತ್ತಿರುವುದಾಗಿ ಘೋಷಿಸಿದ್ದರು. ಅಮಿತ್​ ಷಾ ಅವರ ಕಚೇರಿ ಮಧ್ಯಾಹ್ನ 2 ಗಂಟೆಗೆ ಭೇಟಿಯ ಸಮಯವನ್ನು ನಿಗದಿ ಮಾಡಿದೆ ಎಂದು ಹೇಳಿದ್ದರು. ಆದರೆ ಇದೊಂದು ಸುಳ್ಳು ಸುದ್ದಿ ಎಂದು ಗೃಹ ಸಚಿವಾಲಯ ತಿಳಿಸಿದೆ.
ಭಾನುವಾರದಂದು ಅಮಿತ್​ ಷಾ ಅವರು ಯಾವುದೇ ಪ್ರತಿಭಟನಾಕಾರರನ್ನು ಭೇಟಿ ಮಾಡುತ್ತಿಲ್ಲ ಎಂದು ಗೃಹ ಸಚಿವಾಲಯವು ಸ್ಪಷ್ಟನೆ ನೀಡಿದೆ.
ಇಂದು ಅಮಿತ್​ ಷಾರನ್ನು ಭೇಟಿ ಮಾಡುತ್ತೇವೆ ಎಂದಿದ್ದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಪಟ್ಟಿಯನ್ನು ಗೃಹ ಸಚಿವರ ಎದುರು ಇಡುವುದಾಗಿ ತಿಳಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕು ಎಂಬುದು ತಮ್ಮ ಪ್ರಥಮ ಬೇಡಿಕೆ ಎಂದು ಅವರು ಹೇಳಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 5 =
Remember me
