ನವದೆಹಲಿ:ಕೇಂದ್ರ ಸರ್ಕಾರದ್ದು ಕಾರ್ಮಿಕ ವಿರೋಧಿ ನೀತಿ ಎಂದು ಆರೋಪಿಸಿ ದೇಶಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್​ಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಟ್ವೀಟ್​ ಮಾಡಿರುವ ರಾಹುಲ್​ ಗಾಂಧಿ, ನರೇಂದ್ರ ಮೋದಿ- ಅಮಿತ್​ ಷಾ ಸರ್ಕಾರರ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ನಿರುದ್ಯೋಗವೆಂಬ ದುರಂತ ಸಂಭವಿಸಿದೆ. ನರೇಂದ್ರ ಮೋದಿಯವರ ಕ್ರೋನಿ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ದೇಶದ ಸಾರ್ವಜನಿಕ ವಲಯದ ಸಂಸ್ಥೆಗಳನ್ನೇ ದುರ್ಬಲಗೊಳಿಸಲಾಗಿದೆ.
ಇವತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ದ್ಯೋತಕವಾಗಿ ಭಾರತ್ ಬಂದ್​ ನಡೆಸುತ್ತಿರುವ 25 ಕೋಟಿ ಕಾರ್ಮಿಕರಿಗೆ ಒಂದು ಸೆಲ್ಯೂಟ್​ ಎಂದು ರಾಹುಲ್​ ಗಾಂಧಿ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.
ಕೇಂದ್ರ ಸರ್ಕಾರ ಕಾರ್ಮಿಕ ನೀತಿಗೆ ವಿರೋಧ ವ್ಯಕ್ತಪಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ ಸುಮಾರು 10 ಕಾರ್ಮಿಕ ಸಂಘಟನೆಗಳು ವಿವಿಧ ರಾಜ್ಯ ಕಾರ್ಮಿಕ ಒಕ್ಕೂಟಗಳೊಂದಿಗೆ ಸೇರಿ ಇಂದು ಭಾರತ್​ ಬಂದ್​ ನಡೆಸುತ್ತಿವೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 11 =
Remember me
