ಬೆಂಗಳೂರು:2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶೋಯೆಬ್ 12 ವರ್ಷದ ಬಳಿಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಕೇಂದ್ರ ತನಿಖಾ ತಂಡಗಳ ಸಹಾಯದಿಂದ ಬೆಂಗಳೂರು ಪೊಲೀಸರ ತಂಡ ಕೇರಳದಲ್ಲಿ ಬಂಧಿಸಿದೆ.
2008ರಲ್ಲಿ ಸರಣಿ ಸ್ಫೋಟ ಘಟನೆ ಶೋಯೆಬ್ ತಲೆಮರೆಸಿಕೊಂಡಿದ್ದ. ವಿದೇಶಕ್ಕೆ ಪರಾರಿಯಾಗದಂತೆ ಈತನ ವಿರುದ್ಧ ರೆಡ್‌ಕಾರ್ನರ್ ನೋಟಿಸ್ ಕೂಡ ಹೊರಡಿಸಲಾಗಿತ್ತು. ಈತ ಕೇರಳದಲ್ಲಿ ತಲೆಮರೆಸಿಕೊಂಡಿರುವ ಸುಳಿವು ಸಿಕ್ಕ ಬೆನ್ನಲ್ಲೇ ತನಿಖಾ ಸಂಸ್ಥೆ ಕೇರಳಕ್ಕೆ ತೆರಳಿ ಆತನನ್ನು ಬಂಧಿಸಿದೆ. ಸದ್ಯದಲ್ಲೇ ಕಾನೂನು ಪ್ರಕ್ರಿಯೆ ಮುಗಿಸಿ ಬೆಂಗಳೂರಿಗೆ ಕರೆತರಲಾಗುವುದು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ:ಡ್ರಗ್ಸ್​ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ: ಇಂದ್ರಜಿತ್​ ಲಂಕೇಶ್​
2008ರ ಜುಲೈ 25ರಂದು ಬೆಂಗಳೂರಿನ 9 ಸ್ಥಳಗಳಲ್ಲಿ ಒಂದೇ ದಿನ ಬಾಂಬ್ ಸ್ಫೋಟಿಸಿದ್ದರು. ಪರಿಣಾಮ ಒಬ್ಬರು ಮೃತಪಟ್ಟು, 20 ಜನ ಗಾಯಗೊಂಡಿದ್ದರು. ಕೇರಳ ಮೂಲದ ಅಬ್ದುಲ್ ನಾಸಿರ್ ಮದನಿ ಸ್ಫೋಟದ ಮಾಸ್ಟರ್ ಮೈಂಡ್ ಆಗಿದ್ದ. ಈ ಮೂರು ಸರಣಿ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಲಷ್ಕರ್ ಏ ತಯ್ಬ ಮತ್ತು ಸಿಮಿ ಸಂಘಟನೆಗಳ ಕೈವಾಡ ಇದೆ ಎಂದು ಶಂಕಿಸಲಾಗಿದೆ. ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಲಷ್ಕರ್ ಏ ತಯ್ಬ ಕಮಾಂಡರ್ ಟಿ. ನಸೀರ್‌ನನ್ನೂ ಈ ಹಿಂದೆ ಕರ್ನಾಟಕ ಪೊಲೀಸರು ವಶಕ್ಕೆ ಪಡೆದಿದ್ದರು.
ಉಗ್ರರ ಸುರಕ್ಷಿತ ತಾಣವಾಗುತ್ತಿದೆಯಾ ನೆರೆಯ ಕೇರಳ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − nine =
Remember me
