ನವದೆಹಲಿ/ಬೆಂಗಳೂರು:ಇಡೀ ದೇಶದಲ್ಲಿ ಕರೊನಾದಿಂದ ಗುಣಪಡುತ್ತಿರುವವರ ಸಂಖ್ಯೆ ಶೇಕಡಾ 28.83ರಷ್ಟಿದ್ದರೆ ಕರ್ನಾಟಕದಲ್ಲಿ ಇದು ಶೇಕಡಾ 51ರಷ್ಟಿರುವುದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಸಂಖ್ಯೆಗಳಿಂದ ತಿಳಿದುಬಂದಿದೆ.
ದೇಶಾದ್ಯಂತ ಕರೊನಾ ಸಾಂಕ್ರಾಮಿಕ ರೋಗಪೀಡಿತರ ಪೈಕಿ ಶೇಕಡಾ 28.83ರಷ್ಟು ಜನರು ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಗುರುವಾರ ಸಂಜೆಯ ಅಂಕಿಸಂಖ್ಯೆಗಳ ಪ್ರಕಾರ, ಒಟ್ಟು 705 ಕರೊನಾ ಸೋಂಕಿತರಿದ್ದು ಅದರಲ್ಲಿ 366 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ!
ಕಳೆದ 24 ತಾಸಿನಲ್ಲಿ ದೇಶಾದ್ಯಂತ 1,500ಕ್ಕೂ ಹೆಚ್ಚು ಕರೊನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 54 ಸಾವಿರಕ್ಕಿಂತ ಹೆಚ್ಚಾಗಿದೆ. ಜತೆಗೆ ಕರೊನಾದಿಂದ ಮೃತಪಟ್ಟವರ ಸಂಖ್ಯೆ 1800ಕ್ಕಿಂತ ಹೆಚ್ಚಾಗಿದೆ.
ಇದನ್ನೂ ಓದಿರಾಜ್ಯದಲ್ಲಿ ಮದ್ಯ ಮಾರಾಟ, ಮದ್ಯಪಾನ ನಿಷೇಧಿಸಬೇಕು: ಸಚಿವ ಸಿ.ಟಿ. ರವಿ ಪ್ರತಿಪಾದನೆ
24 ತಾಸಿನಲ್ಲಿ 325 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟಾರೆ 15,600ಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. 37 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ ಎಂದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ದೇಶದಲ್ಲಿ ಮೊದಲ ಹತ್ತು ಸಾವಿರ ಸೋಂಕಿತರು ಪತ್ತೆಯಾಗಲು ಸುಮಾರು ಒಂದೂವರೆ ತಿಂಗಳು ಹಿಡಿದಿತ್ತು. ಆದರೆ ಕೇವಲ ನಾಲ್ಕು ದಿನಗಳಲ್ಲಿ 40 ಸಾವಿರದಿಂದ 50 ಸಾವಿರಕ್ಕೆ ತಲುಪಿತು ಎಂದು ಅಧಿಕಾರಿಗಳು ಹೇಳಿದ್ದಾರೆ.ತಮಿಳುನಾಡಿನಲ್ಲಿ ಗುರುವಾರ ಮತ್ತೆ 580 ಹೊಸ ಪ್ರಕರಣ ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ ಕೋವಿಡ್-19 ರೋಗಿಗಳ ಪ್ರಮಾಣ ಏರುತ್ತಲೇ ಇದ್ದು ಚೆನ್ನೈನೊಂದಿಗೆ ಅಹಮದಾಬಾದ್ ಕೂಡ ಹೊಸ ಹಾಟ್‌ಸ್ಪಾಟ್ ಆಗಿ ಹೊರಹೊಮ್ಮಿದೆ. ಕೇರಳದಲ್ಲಿ ಪತ್ತೆಯಾಗಿದ್ದ 502 ಪ್ರಕರಣಗಳಲ್ಲಿ ಈಗ ಕೇವಲ 30 ಕೇಸ್‌ಗಳು ಸಕ್ರಿಯವಾಗಿವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಪಟ್ಟು ಹಿಡಿದು ಮದ್ಯದಂಗಡಿ ಬಂದ್ ಮಾಡಿಸಿದ ಮಹಿಳೆಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 1 =
Remember me
