ಬೆಂಗಳೂರು:ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಟರ್ಮಿನಲ್​-2ಗೆ ಅಂತಾರಾಷ್ಟ್ರೀಯ ಕಾರ್ಯಾಚರಣೆಯನ್ನು ಸ್ಥಳಾಂತರಗೊಳಿಸುವ ಪ್ರಸ್ತಾಪವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಹೀಗಾಗಿ ಅಂತಾರಾಷ್ಟ್ರೀಯ ಕಾರ್ಯಾಚರಣೆ ಈಗ ಎಂದಿನಂತೆ ಟರ್ಮಿನಲ್-1ರಲ್ಲೇ ಮುಂದುವರಿಯಲಿದೆ.
ಈ ಕುರಿತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ವಕ್ತಾರರೇ ಮಾಹಿತಿಯೊಂದನ್ನು ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಕ್ಕೆ ಅಂತಾರಾಷ್ಟ್ರೀಯ ಕಾರ್ಯಾಚರಣೆಯನ್ನು ಆ.31ರಂದು ಸ್ಥಳಾಂತರಿಸುವ ಪ್ರಸ್ತಾಪವನ್ನು ಮುಂದೂಡಲಾಗಿದೆ. ಎಲ್ಲ ನಿಯಂತ್ರಕ ಪ್ರಾಧಿಕಾರಗಳೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಣಯ ತಳೆಯಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ನಮ್ಮ ಪ್ರಯಾಣಿಕರಿಗೆ ಸೂಕ್ತ ಮತ್ತು ತಡೆರಹಿತ ಪ್ರಯಾಣ ಒದಗಿಸುವ ಸಲುವಾಗಿ ಅಂತಿಮ ಸನ್ನದ್ಧತೆ ಪರಿಶೀಲನೆಯ ಸಮಯದ ಕೊನೆಯ ಕ್ಷಣಗಳಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ಸೂಚನೆ ಬರುವವರೆಗೆ ಅಂತಾರಾಷ್ಟ್ರೀಯ ಕಾರ್ಯಾಚರಣೆಗಳು ಟರ್ಮಿನಲ್ 1ರಲ್ಲಿ ಉಳಿಯುತ್ತವೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಕೋಚಿಂಗ್​ಗೆ ತೆರಳುವ ಮಕ್ಕಳೊಂದಿಗೆ ಮನೆ ಬಿಡುತ್ತಿರುವ ತಂದೆ-ತಾಯಿ, ಅಜ್ಜ-ಅಜ್ಜಿ; ಕಾರಣ ಭಯಾನಕ!
ಈ ನಿರ್ಧಾರದಿಂದ ಉಂಟಾದ ಅನನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ನಮ್ಮ ಪ್ರಯಾಣಿಕರಿಗೆ ಸಾಧ್ಯವಾದಷ್ಟೂ ಉತ್ತಮ ಪ್ರಯಾಣದ ಅನುಭವ ಒದಗಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುವಾಗ ನಿಮ್ಮ ತಾಳ್ಮೆ ಹಾಗೂ ತಿಳುವಳಿಕೆಯನ್ನು ಪ್ರಶಂಸಿಸುತ್ತೇವೆ. ಹೆಚ್ಚಿನ ಮಾಹಿತಿಗಾಗಿ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರು ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ವಿನಂತಿಸುತ್ತೇವೆ ಎಂದು ತಿಳಿಸಿದ್ದಾರೆ.
ಪೊಲೀಸ್ ‘ಪೋಸ್ಟ್​’ಗಳಲ್ಲೂ ಕ್ರಿಯೇಟಿವಿಟಿ; ಇಂಪ್ರೆಸ್​ ಆಗುವಂತೆ ‘ಎಕ್ಸ್​’ಪ್ರೆಸ್ ಮಾಡುತ್ತಿರುವ ಪೊಲೀಸರು!

ನೆಲದಡಿಯಲ್ಲಿದೆ ಎರಡಂತಸ್ತಿನ ಮನೆ; ಇದರ ನಿರ್ಮಾಣಕ್ಕೆ ಈತ ತೆಗೆದುಕೊಂಡ ಸಮಯ 12 ವರ್ಷ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 20 =
Remember me
