ಬೆಂಗಳೂರು:ಪಿಎಸ್​ಐ ಹಗರಣವನ್ನು ಕಂಡು ಹಿಡಿದಿದ್ದೇ ಗೃಹ ಸಚಿವರು, ಹಾಗಾಗಿ ಅವರನ್ನು ಅಭಿನಂದಿಸಬೇಕಿತ್ತು, ಚುನಾವಣೆ ಸಮೀಪಿಸುತ್ತಿದ್ದಂತೆ ಗಿಮಿಕ್​ ಮಾಡುವುದು ಕಾಂಗ್ರೆಸ್​ಗೆ ರಕ್ತಗತವಾಗಿದೆ ಎಂದು ಸಚಿವ ಆರ್​.ಅಶೋಕ್​ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಏಕಾಏಕಿ ಈಗ ಪ್ರಕರಣವನ್ನು ಬೆಂಗಳೂರಿಗೆ ತಂದು ಅಶ್ವಥ್ ನಾರಾಯಣ್ ಮೇಲೆ ದಾಖಲೆಗಳಿಲ್ಲದೇ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದರು.
ಹಿಂದೆ ಬಿಟ್ ಕಾಯಿನ್ ನಲ್ಲೂ ಹೀಗೆ ಆರೋಪ ಮಾಡಿ ಝೀರೋ ಆಯ್ತು, ಕಾಂಗ್ರೆಸ್ ಸಂತೆ ಭಾಷಣ ಬಿಟ್ಟು ದಾಖಲೆ ಇದ್ದರೆ ಕೊಡಲಿ. ಚುನಾವಣಾ ಗಿಮಿಕ್ ಮಾಡಲು ಅವರಿಗೆ ಇನ್ನೂ ಸಮಯ ಇದೆ. ನಿಮ್ಮ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿರುವಾಗ ಬಿಜೆಪಿ ತಟ್ಟೆಯಲ್ಲಿ ನೊಣ ಬಿದ್ದಿದೆ ಅಂತಾ ಹೇಳಲು ಬರಬೇಡಿಡಬಲ್ ಇಂಜಿನ್ ಭಯದಿಂದ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ ಎಂದರು.
ಸಿಎಂ ಆಗುವುದು ಎಲ್ಲಾ ಪಾರ್ಟಿ ತೀರ್ಮಾನ ಮಾಡುತ್ತದೆ. ಅಶ್ವಥ್ ನಾರಾಯಣ ಎಲ್ಲೂ ನಾನು ಸಿಎಂ ಆಗ್ತೀನಿ ಅಂತ ಹೇಳಿಲ್ಲ. ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಅಶ್ವಥ್ ನಾರಾಯಣ ಉಲ್ಲೇಖ ಮಾಡಿದ್ದಾರೆ ಎಂದರು.
ಗೃಹ ಸಚಿವರ ಪಾತ್ರ ಪ್ರಕರಣದಲ್ಲಿ ಇಲ್ಲ. ಸ್ವಪಕ್ಷೀಯರೇ ದಾಖಲೆ ಕೊಟ್ಟಿದ್ದಾರೆ ಎಂಬ ಕುಮಾರಸ್ವಾಮಿ ಆರೋಪ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಕಾಂಗ್ರೆಸ್ ಗಿಂತ ಸ್ವಲ್ಪ ಮುಂದೆ ಹೋಗಿ ಟೀಕೆ ಮಾಡ್ತಿದ್ದಾರೆ.ಸ್ವಲ್ಪ ಅವರ ಪಕ್ಷದಲ್ಲಿ ಏನು ಆಗ್ತಿದೆ ಅಂತಾ ನೋಡಿಕೊಳ್ಳಲಿ.ನಮ್ಮ ಪಕ್ಷದ ವಿಚಾರ ನೋಡಿಕೊಳ್ಳಲು ಬಲಾಢ್ಯ ಕೇಂದ್ರದ ನಾಯಕತ್ವ ಇದೆ.ಜೆಡಿಎಸ್, ಕಾಂಗ್ರೆಸ್ ನಲ್ಲಿ ವಂಶದ ನಾಯಕತ್ವ ಇದೆ. ವಂಶದ ನಾಯಕತ್ವದಿಂದ ಬಿಜೆಪಿ ಕಲಿಯಬೇಕಾಗಿಲ್ಲ.ವೈಯಕ್ತಿಕ ದ್ವೇಷಗಳು ರಾಜಕೀಯವಾಗಿ ಒಳ್ಳೆಯದಲ್ಲ. ಸೈದ್ಧಾಂತಿಕವಾಗಿ ಹೋರಾಟ ಮಾಡಬೇಕು ಎಂದು ಹೇಳಿದರು.
9 ವರ್ಷಗಳ ಬಳಿಕ ಸೈನಿಕರಿಗೆ ಸಿಹಿಸುದ್ದಿ: ಕೆಲವೇ ದಿನದಲ್ಲಿ ಕೈ ಸೇರಲಿದೆ ಬುಲೆಟ್​ ಪ್ರೂಫ್​ ಜಾಕೆಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 1 =
Remember me
