ನವದೆಹಲಿ:ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿರುವ ಏಕನಾಥ್​ ಶಿಂಧೆ ಅವರ ನೇಮಕವನ್ನು ಪ್ರಶ್ನಿಸಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇದೇ ಜುಲೈ 11 ರಂದು ನಡೆಸಲು ಸುಪ್ರೀಂಕೋರ್ಟ್​ ಒಪ್ಪಿಗೆ ನೀಡಿದೆ.
ರಜೆ ಪೀಠದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆಕೆ ಮಹೇಶ್ವರಿ ಅವರಿದ್ದ ವಿಭಾಗೀಯ ಪೀಠ ಜುಲೈ 11ಕ್ಕೆ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಈಗಾಗಲೇ ಬಾಕಿ ಇರುವ ಅರ್ಜಿಗಳೊಂದಿಗೆ ಹೊಸ ಅರ್ಜಿ ವಿಚಾರಣೆಯನ್ನೂ ನಡೆಸಬೇಕೆಂದು ಹಿರಿಯ ವಕೀಲ ದೇವದತ್​ ಕಾಮಪತ್​ ಶಿವಸೇನೆಯ ನಾಯಕ ಸುಭಾಷ್​ ದೇಸಾಯಿ ಅವರ ಪರ ಹಾಜರಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಇದರ ಜತೆಗೆ ಜೂನ್​ 30 ರಂದು ಶಿಂಧೆ ಬಣಕ್ಕೆ ಬಿಜೆಪಿ ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲರ ನಿರ್ಧಾರವನ್ನು ಕೋರ್ಟ್​ನಲ್ಲಿ ಪ್ರಶ್ನಿಸಿದ್ದು, ಹೊಸ ಸ್ಪೀಕರ್ ಆಯ್ಕೆ ಸೇರಿದಂತೆ ಜುಲೈ 3 ಮತ್ತು 4 ರಂದು ನಡೆದ ವಿಧಾನಸಭಾ ಪ್ರಕ್ರಿಯೆಗಳನ್ನು ಸಹ ಠಾಕ್ರೆ ಬಣ ಪ್ರಶ್ನಿಸಿದೆ.(ಏಜೆನ್ಸೀಸ್​)
ತಾನೇ ತಯಾರಿಸಿದ ಬಂದೂಕಿನಿಂದ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + seven =
Remember me
