ನವದೆಹಲಿ:ಉದ್ಯಮಿ ಮುಖೇಶ್​ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಮುಂದುವರಿಸಲು ಸುಪ್ರೀಂಕೋರ್ಟ್​ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ಅವರಿದ್ದ ನ್ಯಾಯಮೂರ್ತಿಗಳಾದಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ, ಭದ್ರತೆ ಮುಂದುವರೆಸಲು ಅನುಮತಿಸಿದೆ.
ತ್ರಿಪುರಾ ಹೈಕೋರ್ಟ್​ ನಿರ್ದೇಶನವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ಭದ್ರತೆ ಮುಂದುವರಿಸಲು ಸೂಚಿಸಿದೆ.
ಮುಂಬೈನಲ್ಲಿರುವ ಉದ್ಯಮಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭದ್ರತೆ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ತ್ರಿಪುರಾ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಜೂನ್ 29 ರಂದು ತಡೆ ನೀಡಿತ್ತು.
ಬಿಕಾಶ್​ ಸಾಹಾ ಎಂಬುವವರು ಮುಕೇಶ್​ ಅಂಬಾನಿಗೆ ನೀಡಲಾಗಿರುವ ಭದ್ರತೆಯನ್ನು ಪ್ರಶ್ನಿಸಿ ಕೋರ್ಟ್​​ ಮೆಟ್ಟಿಲೇರಿದ್ದರು.(ಏಜೆನ್ಸೀಸ್)
ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದರೂ 10 ಜಿಲ್ಲೆಗಳಲ್ಲಿ ಮಳೆಯೇ ಇಲ್ಲ! ಮತ್ತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಮಗು ದತ್ತು ಪಡೆಯಲು 28,663 ಭಾರತೀಯರಿಂದ ಅರ್ಜಿ: ಕೇಂದ್ರಕ್ಕೆ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 8 =
Remember me
