ನವದೆಹಲಿ:ನಿರ್ಭಯಾ ಅತ್ಯಾಚಾರ ಅಪರಾಧಿಗಳ ಗಲ್ಲುಶಿಕ್ಷೆಯನ್ನು ತಡೆಹಿಡಿದ ಪಟಿಯಾಲಾ ಕೋರ್ಟ್​ನ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿವೆ.
ನಿನ್ನೆ ತೀರ್ಪು ನೀಡಿದ್ದ ಹೈಕೋರ್ಟ್​ ಕೇಂದ್ರದ ಅರ್ಜಿಯನ್ನು ವಜಾಗೊಳಿಸಿತ್ತು. ನಾಲ್ವರು ಅಪರಾಧಿಗಳನ್ನು ಒಟ್ಟಿಗೇ ಗಲ್ಲಿಗೇರಿಸಬೇಕು. ಹಾಗೇ ಅಪರಾಧಿಗಳು ಇನ್ನೊಂದು ವಾರಗಳಲ್ಲಿ ತಮ್ಮ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿಕೊಳ್ಳಬೇಕು ಎಂದು ಆದೇಶ ನೀಡಿತ್ತು.
ಈಗ ಹೈಕೋರ್ಟ್​ ಅರ್ಜಿ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್​ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಅಪರಾಧಿಗಳನ್ನು ಗಲ್ಲಿಗೇರಿಸಲು ಬ್ಲ್ಯಾಕ್​ ವಾರಂಟ್​ ಜಾರಿ ಮಾಡಬೇಕು ಎಂದು ಒತ್ತಾಯಿಸಿರುವ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಎನ್​.ವಿ.ರಮಣ, ಸಂಜೀವ್​ ಖನ್ನಾ ಮತ್ತು ಕೃಷ್ಣಾ ಮುರಾರಿ ಅವರನ್ನೊಳಗೊಂಡ ಪೀಠಕ್ಕೆ ಮನವಿ ಮಾಡಿದ್ದಾರೆ.
ಕೇಂದ್ರದ ಅರ್ಜಿಯನ್ನು ನಾಳೆ (ಫೆಬರವರಿ 7) ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್​ ತಿಳಿಸಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + nine =
Remember me
