ವಿಜಯವಾಡ:ಮದುವೆ ಸಮಾರಂಭ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವಾಹನ ಬ್ರೇಕ್​ ಫೇಲ್​ ಆದ ಕಾರಣ ಬೆಟ್ಟದಿಂದ ಕೆಳಗಡೆ ಉರುಳಿ, 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ಈಸ್ಟ್​ ಗೋದಾವರಿ ಜಿಲ್ಲೆಯ ತಂತಿಕೊಂಡ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ನಸುಕಿನ ಜಾವ 3.30ರ ಸುಮಾರಿಗೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ತಂತಿಕೊಂಡಾ ಘಾಟ್​ ರಸ್ತೆಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:ಸುಟ್ಟ ಕಾರಿನಲ್ಲಿ ಶವ ಪತ್ತೆ ಪ್ರಕರಣ: ಪತ್ನಿಯ ಪ್ರೀತಿ ನಾಟಕ ನಂಬಿ ಹೋದವನಿಗೆ ಕಾದಿತ್ತು ದುರಂತ ಸಾವು!
ಗುರುವಾರ ರಾತ್ರಿ ಮದುವೆ ಮುಗಿಸಿಕೊಂಡು ಶುಕ್ರವಾರ ಬೆಳಗ್ಗೆ ಊರಿನ ಕಡೆಗೆ ಗಂಡಿನ ಕಡೆಯವರು ವ್ಯಾನ್​ನಲ್ಲಿ ಹೊರಟ್ಟಿದ್ದರು. ಮದುವೆ ಮಂಟಪದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ವ್ಯಾನ್​ ಬೆಟ್ಟದಿಂದ ಕೆಳಕ್ಕೆ ಉರುಳಿದೆ. ಏಳು ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಗೋಕವರಂ ಮಂಡಲದ ಠಾಕೂರ್‌ಪಾಲೆಂ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರಜಮುಂಡ್ರಿ ಗ್ರಾಮಾಂತರ ಪೊಲೀಸ್​ ವರಿಷ್ಠಾಧಿಕಾರಿ ಬಾಜ್​ಪೇಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಶವಪರೀಕ್ಷೆಗೆಂದು ರಾಜಮುಂಡ್ರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.(ಏಜೆನ್ಸೀಸ್​)
ಕಲರ್​ಫುಲ್​ ಬಿಕಿನಿಯಲ್ಲಿ ಕ್ಯಾಮೆರಾಗೆ ಪೋಸ್​ ನೀಡಿರುವ ಬೋಲ್ಡ್​ ಬ್ಯೂಟಿ ಯಾರೆಂದು ಗುರುತಿಸುವಿರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 5 =
Remember me
