ಚೆನ್ನೈ:ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಲವ್​ ಜಿಹಾದ್​ ಆಧಾರಿತ ಸಿನಿಮಾ ದಿ ಕೇರಳ ಸ್ಟೋರಿ ಚಿತ್ರವು ರಾಷ್ಟ್ರಮಟ್ಟದಲ್ಲಿ ಪರ-ವಿರೋಧದ ಚರ್ಚೆ ಹುಟ್ಟು ಹಾಕಿದೆ.
ಇನ್ನು ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಇದೀಗ ಸಿನಿಮಾ ತಂಡಕ್ಕೆ ಆಘಾತ ಒಂದು ಎದುರಾಗಿದ್ದು ಇದನ್ನು ಹೇಗೆ ನಿಭಾಯಿಸಲಿದೆ ಎಂದು ಕಾದು ನೋಡಬೇಕಿದೆ.
ದಿ ಕೇರಳ ಸ್ಟೋರಿ ಚಿತ್ರವು ಬಿಡುಗಡೆಗೂ ಮುನ್ನ ಹಾಗೂ ನಂತರ ಸಾಕಷ್ಟು ವಿವಾದವನ್ನು ಹುಟ್ಟುಹಾಕಿದ್ದು ಸಿನಿಮಾವನ್ನು ಪ್ರದರ್ಶಿಸದಿರಲು ತಮಿಳುನಾಡು ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್​ ಮಾಲೀಕರು ನಿರ್ಧರಿಸಿದ್ದಾರೆ.
ಇದನ್ನೂ ಓದಿ:VIDEO| ಸ್ವರ್ಣ ಮಂದಿರ ಬಳಿ ಬಾಂಬ್​ ಸ್ಪೋಟ; ಹಲವರಿಗೆ ಗಾಯ
ಇನ್ನು ಚಿತ್ರವನ್ನು ಪ್ರದರ್ಶಿಸಿದರೆ ಬೇರೆ ಚಿತ್ರಗಳ ಮೇಲೆ ಹೊಡೆತ ಬೀಳುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ನಮ್ಮ ಆದಾಯದ ಮೇಲೆ ಯಾವುದೇ ಪರಿಣಾಮ ಬೀಳದಂತೆ ನೋಡಿಕೊಳ್ಳಲು ಚಿತ್ರವನ್ನು ಪ್ರದರ್ಶಿಸುವುದಿಲ್ಲ ಎಂದು ಸಂಘದ ಸದಸ್ಯರು ತಿಳಿಸಿದ್ದಾರೆ.
ಇನ್ನು ಕೋಮು ಸೌಹಾರ್ದತೆ ಕದಡುವ ಭೀತಿಯಲ್ಲಿ ದಿ ಕೇರಳ ಸ್ಟೋರಿ ಚಿತ್ರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ.
ತಮಿಳುನಾಡಿನಲ್ಲಿ ಚಿತ್ರ ಬಿಡುಗಡೆಯಾದರೆ ಬೇರೆ ಚಿತ್ರಗಳ ಪ್ರದರ್ಶನ ಹಾಗೂ ಆದಾಯದ ಮೇಲೆ ಹೊಡೆತ ಬೀಳಲಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 5 =
Remember me
