ಬೆಂಗಳೂರು: ಕಾವೇರಿ ನದಿ ನೀರು ವಿಚಾರವಾಗಿ ಹೋರಾಟ ಮಾಡುತ್ತಿರುವ ರೈತರ ಹೋರಾಟದ ಬೆಂಬಲಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೂ ಬೆಂಬಲ ಸೂಚಿಸಿದೆ. ಬಂದ್​​​​ಗೆ ಬೆಂಬಲ ನೀಡಿರುವ ವಾಣಿಜ್ಯ ಮಂಡಳಿಯು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಯಾವುದೇ ಥಿಯೇಟರ್​​ಗಳೂ ತೆರೆದಿರುವುದಿಲ್ಲ ಮತ್ತು ಯಾವುದೇ ಸಿನಿಮಾ ಚಿತ್ರೀಕರಣ ಕೂಡ ಇರುವುದಿಲ್ಲ ಎಂದಿದ್ದಾರೆ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಮ್. ಸುರೇಶ್.
ಈ ಬಗ್ಗೆ ಮಾತನಾಡಿದ ಫಿಲ್ಮ್​​​​ ಚೇಂಬರ್​​ ಅಧ್ಯಕ್ಷ ಎನ್​​​.ಎಮ್​​​. ಸುರೇಶ್​​, ಕಾವೇರಿ ವಿಚಾರ ಗಂಭೀರವಾದ ವಿಚಾರ. ಇದಕ್ಕಾಗಿ ನಮ್ಮ ಸಂಪೂರ್ಣ ಬೆಂಬಲ ಇರುತ್ತೆ. ಚಿತ್ರರಂಗದ ಎಲ್ಲಾ ಅಂಗ ಸಂಸ್ಥೆಗಳ ಜೊತೆ ಚರ್ಚೆ ಮಾಡಬೇಕು. ಕಲಾವಿದರನ್ನು ಭೇಟಿ ಮಾಡಬೇಕು. ಸಮಯದ ಅಭಾವ ತುಂಬಾ ಇದೆ. ಹೀಗಾಗಿ ರೂಪುರೇಷೆಯನ್ನು ಸಾಯಂಕಾಲ ತಿಳಿಸುತ್ತೇವೆ. ರೈತರ ಸಮಸ್ಯೆ ಇದು. ನೀರಿನ ಸಮಸ್ಯೆಗೆ ಸ್ಪಂದಿಸೋದು ನಮ್ಮ ಕರ್ತವ್ಯ. ಸರ್ಕಾರಕ್ಕೆ ಮನದಟ್ಟು ಆಗಬೇಕಂದ್ರೆ ಸಮಯಾವಕಾಶ ಬೇಕು ಎಂದಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗು ಚಿತ್ರಮಂದಿರಗಳನ್ನ ಬಂದ್ ಮಾಡ್ತೀವಿ ಎಂದಿದ್ದಾರೆ ಅಧ್ಯಕ್ಷರು.ಬೆಂಗಳೂರು ಬಂದ್ ಗೆ ಬೆಂಬಲವನ್ನೂ ಸೂಚಿಸಿರುವ ವಾಣಿಜ್ಯ ಮಂಡಳಿ, ಬೆಂಗಳೂರು ಸಿಟಿಯಲ್ಲಿ ಶೂಟಿಂಗ್ ನಡೆಯುವುದಿಲ್ಲ. ಬೆಂಗಳೂರು ಬಿಟ್ಟು ಹೊರಗೆ ಶೂಟಿಂಗ್ ಮಾಡ್ತಿರೋರಿಗೆ ತೊಂದರೆ ಇಲ್ಲ.
ವರುಣ ಕೃಪೆಯಿಲ್ಲದೆ ಕಾವೇರಿ ನೀರಿನ ಪ್ರಮಾಣ ಇಳಿಕೆಯಾಗಿದೆ ಈ ನಡುವೆ ತಮಿಳುನಾಡಿಗೆ ನೀರನ್ನು ಹರಿಯಲು ಬಿಟ್ಟಿದ್ದು ರಾಜ್ಯದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ವಿವಿಧ ರೈತ ಹಾಗೂ ಸಂಘಟನೆಗಳು ಹೋರಾಟ ನಡೆಸುತಿದ್ದು, ಕಾವೇರಿ ಹೋರಾಟಕ್ಕೆ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಹಿರಿಯ ನಟಿ ಎಂ.ಲೀಲಾವತಿ ಇಳಿದಿದ್ದಾರೆ.
ಕಾವೇರಿ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಚಿತ್ರರಂಗದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಸಾಥ್ ನೀಡುತ್ತಿಲ್ಲ ಎನ್ನುವ ಕೂಗು ಎದ್ದಿದೆ. ಈ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾತನಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
