ನವದೆಹಲಿ:ಇತ್ತೀಚೆಗೆ 2023ರ ಕಾನೂನಿನ ಅಡಿಯಲ್ಲಿ ನೇಮಕವಾದ ಹೊಸ ಚುನಾವಣಾ ಆಯುಕ್ತರ ಆಯ್ಕೆಯನ್ನು ತಡೆಹಿಡಿಯುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠವು, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಕಾಯ್ದೆ 2023ರ ಅನುಸಾರವಾಗಿ ಮಾಡಲಾದ ನೇಮಕಾತಿಗಳನ್ನು ತಡೆಹಿಡಿಯಲು ನಿರಾಕರಿಸಿದ್ದು, ಸಾಮಾನ್ಯವಾಗಿ ನಾವು ಮಧ್ಯಂತರ ಆದೇಶದ ಮೂಲಕ ಕಾನೂನಿಗೆ ತಡೆಯನ್ನು ತರುವುದಿಲ್ಲ. ಚುನಾವಣಾ ಆಯುಕ್ತರ ಆಯ್ಕೆಗೆ ಮುಂಚಿತವಾಗಿ ಸಭೆ ನಡೆಸಿರುವುದು ಕಾನೂನುಬಾಹಿರ ಎಂದು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಅರ್ಜಿದಾರ ಪರ ವಕೀಲ ವಿಕಾಸ್ ಸಿಂಗ್, ಮುಖ್ಯ ನ್ಯಾಯಮೂರ್ತಿಯನ್ನು ಆಯ್ಕೆ ಸಮಿತಿಯಿಂದ ಹೊರಗಿಡುವ 2023ರ ಕಾಯ್ದೆಯಲ್ಲಿ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಾದಿಸಿದರು.
ಅಧಿಕಾರ ಸ್ವೀಕಾರ
ಫೆ.14ರಂದು ಅನುಪ್ ಚಂದ್ರ ಪಾಂಡೆ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ರಾಜೀನಾಮೆಯಿಂದ ಚುನಾವಣಾ ಆಯೋಗದಲ್ಲಿ ಖಾಲಿಯಾಗಿದ್ದ ಹುದ್ದೆಗಳಿಗೆ ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಯು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ಆಯ್ಕೆ ಮಾಡಿತ್ತು. ಇಬ್ಬರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
IPL 2024: ಈ ಸೀಸನ್​ನಲ್ಲಿ ಕ್ರಿಕೆಟ್ ಫ್ಯಾನ್ಸ್​ಗಳ ಮುಂದೆ ಕಾಣಿಸಿಕೊಳ್ಳದ ಸ್ಟಾರ್​ ಆಟಗಾರರಿವರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 3 =
Remember me
