ದೇಶವ್ಯಾಪಿಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬೇಸಿಗೆಯ ಬೇಗೆ ತಾಳಲಾರದೆ ತಂಪು..ತಂಪು ಪಾನಿಯಗಳನ್ನು ಕುಡಿಯುವ ಅಭ್ಯಾಸ ಸೇರಿದಂತೆ ಯಥೇಚ್ಚವಾಗಿ ನೀರು ಸೇವಿಸುವುದನ್ನು ರೂಢಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಹವಾಮಾನ ಇಲಾಖೆ ಎಚ್ಚರಿಸಿರುವಂತೆ ಮುಂಬರುವ ಏಪ್ರಿಲ್​-ಜೂನ್​ ತಿಂಗಳಲ್ಲಿ ತಾಪಮಾನದಲ್ಲಿ ಭಾರೀ ಹೆಚ್ಚಳ ಕಂಡುಬರಲಿದೆ ಎಂದು ತಿಳಿಸಿದೆ. ಈ ಮಧ್ಯೆ ಇಲ್ಲೊಂದು ರಾಜ್ಯದ ಶಾಲೆಗಳಲ್ಲಿ ಮೂರು ಬಾರಿ ಕುಡಿಯುವ ನೀರಿಗಾಗಿ ಬೆಲ್​ವೊಂದು ಧ್ವನಿ ಹೊರಡಿಸಲಿದ್ದು, ಇದರಿಂದ ಮಕ್ಕಳು ಎಚ್ಚರಗೊಂಡು ನೀರನ್ನು ಕುಡಿಯುತ್ತಾರೆ.
ಇದನ್ನೂ ಓದಿ:ಅಂಬಾನಿ ಬಂಗಲೆ ಖರೀದಿಸಿದ ಹಾಲಿವುಡ್​ ನಟಿ ಜೆನ್ನಿಫರ್​ ಲೋಪೆಜ್​ ! ಎಷ್ಟು ಕೋಟಿರ ಮಾರಾಟವಾಯ್ತು ಗೊತ್ತಾ?
ಬೇಸಿಗೆಯಲ್ಲಿ ದೇಹವನ್ನು ಹೈಡ್ರೇಟ್ ಆಗಿರಿಸಲು ವಿದ್ಯಾರ್ಥಿಗಳು ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು. ಇದನ್ನು ಖಚಿತಪಡಿಸಿಕೊಳ್ಳಲು ಕೇರಳ ಸರ್ಕಾರವು ಶಾಲೆಗಳಲ್ಲಿ “ವಾಟರ್-ಬೆಲ್” ವ್ಯವಸ್ಥೆಯನ್ನು ಜಾರಿಗೆ ತರಲು ದಾಪುಗಾಲಿಟ್ಟಿದೆ. ಈ ವ್ಯವಸ್ಥೆಯನ್ನು ದೇಶದಲ್ಲಿ ಪರಿಚಯಿಸಿದ ಮೊದಲ ರಾಜ್ಯ ಕೇರಳ ಎಂದು ರಾಜ್ಯ ಜನರೆಲ್ ಶಿಕ್ಷಣ ಸಚಿವರ ಕಚೇರಿ ಮಾಹಿತಿ ಹಂಚಿಕೊಂಡಿದೆ.
“2019ರಲ್ಲಿ ಮೊದಲ ಬಾರಿಗೆ ನಾವು ಕೆಲವು ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಹೆಚ್ಚಿನ ತಾಪಮಾನದ ಮಟ್ಟದಿಂದಾಗಿ ಇದನ್ನು ಜಾರಿಗೆ ತಂದಿದ್ದೇವೆ. ನಮ್ಮ ನಂತರದಲ್ಲಿ ಕರ್ನಾಟಕ, ತೆಲಂಗಾಣದಂತಹ ರಾಜ್ಯಗಳು ಇದನ್ನು ತಮ್ಮ ರಾಜ್ಯಗಳಲ್ಲಿ ಜಾರಿಗೆ ತಂದಿವೆ. ಈಗ ಹೆಚ್ಚುತ್ತಿರುವ ಪಾದರಸದ ಮಟ್ಟವನ್ನು ಪರಿಗಣಿಸಿ ನಾವು ರಾಜ್ಯದಾದ್ಯಂತ ಶಾಲೆಗಳಲ್ಲಿ ಇದನ್ನು ಜಾರಿಗೊಳಿಸಿದ್ದೇವೆ ಎಂದು ಕಚೇರಿ ತಿಳಿಸಿದೆ.
ಇದನ್ನೂ ಓದಿ:ಸಾಲ ಭರಪೂರ, ಬೆನ್ನೇರಿದೆ ತೆರಿಗೆ ಭಾರ!: ತಲೆಕೆಳಗಾಯ್ತು ಸರ್ಕಾರದ ಗ್ಯಾರಂಟಿ ಲೆಕ್ಕಾಚಾರ
ಎಲ್ಲಾ ಶಾಲೆಗಳಲ್ಲಿ ಬೆಳಗ್ಗೆ 10.30 ಮತ್ತು ಮಧ್ಯಾಹ್ನ 2.30ಕ್ಕೆ ಎರಡು ಬಾರಿ ಬೆಲ್ ಬಾರಿಸಲಾಗುವುದು. ಇದು ಮಕ್ಕಳಿಗೆ ನೀರು ಕುಡಿಯುವಂತೆ ಅಲರ್ಟ್​ ಮಾಡುತ್ತದೆ. ಹವಾಮಾನ ವೈಪರೀತ್ಯದಿಂದ ರಾಜ್ಯದಲ್ಲಿ ತಾಪಮಾನ ಗರಿಷ್ಠವಾಗಿ ಏರಿಕೆಯಾಗುತ್ತಿದ್ದು, ಶಾಲಾ ಅವಧಿಯಲ್ಲಿ ಮಕ್ಕಳು ಸಾಕಷ್ಟು ನೀರು ಸೇವಿಸುವಂತೆ ನೋಡಿಕೊಳ್ಳುವುದು ಅಗತ್ಯ. ಇದು ಮಕ್ಕಳಲ್ಲಿ ನಿರ್ಜಲೀಕರಣ ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ,(ಏಜೆನ್ಸೀಸ್).
2021ರಲ್ಲಿ ಮುಂಬೈ ಇಂಡಿಯನ್ಸ್​ ಬಿಟ್ಟಿದ್ದೂ ಇದೇ ಕಾರಣಕ್ಕೆ… ಮುಖಕ್ಕೆ ಹೊಡದಂಗೆ ಹೇಳಿದ್ರು ರವಿಶಾಸ್ತ್ರಿ

ಈ ಹೋಟೆಲ್​ಗೆ ಮಾತ್ರ ಹೋಗಲೇಬೇಡಿ! ಇಲ್ಲಿಗೆ ಹೋದ್ರೆ ಖಂಡಿತ ಅವಮಾನ, ಕಣ್ಣೀರು ತಪ್ಪಿದ್ದಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
