ಮುಂಬೈ: ಮಕ್ಕಳು-ಮಹಿಳೆಯರ ಮೇಲಿನ ದೌರ್ಜನ್ಯ ಮತ್ತೂ ಮುಂದುವರಿದಿದೆ. ಆಗಾಗ ವರದಿಯಾಗುತ್ತಲೇ ಇರುವ ಅತ್ಯಾಚಾರ ಪ್ರಕರಣಗಳ ಪಟ್ಟಿಗೆ ಇದೀಗ ಮತ್ತೊಂದು ಪ್ರಕರಣ ಸೇರ್ಪಡೆ ಆಗಿದೆ. ಅತ್ಯಂತ ಅಮಾನವೀಯ ಸಂಗತಿ ಎಂದರೆ ಈ ಕಾಮುಕರು ಮೂರು ವರ್ಷದ ಬಾಲಕಿಯನ್ನೂ ಬಿಟ್ಟಿಲ್ಲ.
ಮಹಿಳೆಯೊಬ್ಬರು ತನ್ನ ಮೂರು ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇಬ್ಬರ ವಿರುದ್ಧ ಕೇಸು ದಾಖಲಿಸಿದ್ದಾರೆ. ಅದರಲ್ಲೂ ಈ ಗ್ಯಾಂಗ್ ರೇಪ್ ಮಾಡಿರುವುದು ಇಬ್ಬರು ಅಪ್ರಾಪ್ತ ಬಾಲಕರು.
ಅಂದಹಾಗೆ ಮುಂಬೈನಲ್ಲಿ ಈ ಪ್ರಕರಣ ನಡೆದಿದ್ದು, ಶನಿವಾರ ಈ ಬಗ್ಗೆ ಪೊಲೀಸರು ಮಾಹಿತಿ ಬಹಿರಂಗಪಡಿಸಿದ್ದಾರೆ. ಆರೋಪಿಗಳನ್ನು ರಿಮ್ಯಾಂಡ್​ ಹೋಮ್​ನಲ್ಲಿ ಇರಿಸಲಾಗಿದೆ. ಆರೋಪಿಗಳಿಬ್ಬರೂ ಸಂತ್ರಸ್ತೆಯ ಕುಟುಂಬಕ್ಕೆ ಪರಿಚಿತರೇ ಆಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fourteen =
Remember me
