ಮೀರತ್​:ಚರಂಡಿ ಮೂಲಕ 10 ಅಡಿ ಸುರಂಗ ಕೊರೆದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಕಳ್ಳರು ದೋಚಿರುವ ಘಟನೆ ಉತ್ತರಪ್ರದೇಶದ ಮೀರತ್​ನಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಎಂದಿನಂತೆ ಅಂಗಡಿ ಮಾಲೀಕ ಮಳಿಗೆ ತೆರೆದಾಗ ಘಟನೆ ಬೆಳಕಿಗೆ ಬಂದಿದೆ. ಚರಂಡಿ ಮೂಲಕ ಸುರಂಗ ಕೊರೆದಿರುವುದನ್ನು ಗಮನಿಸಿದ ಮಾಲೀಕ ಪೊಲೀಸರಿಗೆ ದೂರು ನೀಡಿ ಆರೋಪಿಗಳನ್ನು ಬಂಧಿಸುವಂತೆ ವಿನಂತಿಸಿದ್ದಾರೆ.
ಚಿನ್ನಾಭರಣ ಮಳಿಗೆಯಲ್ಲಿ ಕಳ್ಳತನವಾಗಿರುವ ಸುದ್ಧಿ ನಗರದಾದ್ಯಂತ ಹರಡುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಬುಲಿಯನ್​ ಟ್ರೇಡರ್ಸ್​ ಅಸೋಸಿಯೇಷನ್(BTA)​ ಸದಸ್ಯರು ಪೊಲೀಸರ ವಿರುದ್ದ ಘೋಷಣೆಗಳನ್ನ ಕೂಗಿ ಆಕ್ರೋಶವನ್ನು ಹೊರಹಾಕಿದ್ದಾರೆ.
ಇದನ್ನೂ ಓದಿ:ವಿದ್ಯುತ್​ ತೆಗೆದಿದ್ದಕ್ಕೆ ಆಕ್ರೋಶ; ಮಹಾ ಡಿಸಿಎಂ ಮನೆಗೆ ಬಾಂಬ್​​ ಬೆದರಿಕೆ ಹಾಕಿದ ಯುವಕ
ಘಟನೆ ಕುರಿತು ಪ್ರತಿಕ್ರಿಯಿಸಿರುವ BTA ಸದಸ್ಯರು ನಗರದಲ್ಲಿ ಇದು ಒಟ್ಟಾರೆ ನಾಲ್ಕನೇ ಪ್ರಕರಣವಾಗಿದ್ದು ಇದುವರೆಗೂ ಪೊಲೀಸರು ಯಾರನ್ನು ಸಹ ಬಂಧಿಸಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಿ ಕಳ್ಳರನ್ನು ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಕಳ್ಳರು ಚರಂಡಿಯ ಒಂದು ಭಾಗದಿಂದ ಸುರಂಗವನ್ನು ಕೊರೆದು ಅಂಗಡಿಯನ್ನು ದೋಚಿದ್ದಾರೆ. ಕಳ್ಳತನವಾಗಿರುವ ಚಿನ್ನಾಭರಣದ ಒಟ್ಟು ಮೌಲ್ಯದ ಬಗ್ಗೆ ಇನ್ನು ತಿಳಿದು ಬಂದಿಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − one =
Remember me
