ಪಶ್ಚಿಮ ಬಂಗಾಳ:ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆಯನ್ನು ಪ್ರತಿಭಟಿಸುತ್ತಿರುವ ವೈದ್ಯರಿಗೆ ತಾನು ಎಂದಿಗೂ ಬೆದರಿಕೆ ಹಾಕಿಲ್ಲ ಎಂದು ತನ್ನ ಮೇಲೆ ಬಿಜೆಪಿ ಮಾಡಿದ ಆರೋಪಗಳನ್ನು ತಳ್ಳಿಹಾಕಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಇದೆಲ್ಲಾ ಶುದ್ಧ ಸುಳ್ಳು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಭಾರತೀಯರೆಲ್ಲರೂ ಮೂಲ ಹಿಂದುಗಳು
ಬುಧವಾರ (ಆ.29) ವಿದ್ಯಾರ್ಥಿಗಳ ವಿಭಾಗದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, 21 ದಿನಗಳಿಂದ ಕರ್ತರ್ವ್ಯದಿಂದ ಹೊರಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಸರ್ಕಾರಿ ಆಸ್ಪತ್ರೆಗಳಲ್ಲಿನ ಕಿರಿಯ ವೈದ್ಯರನ್ನು ಕೆಲಸಕ್ಕೆ ಮರಳುವಂತೆ ಒತ್ತಾಯಿಸಿದ ಅವರು, ಮುಷ್ಕರ ನಿರತ ವೈದ್ಯರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಾನು ಬಯಸವುದಿಲ್ಲ. ಹೀಗೆ ಮಾಡುವುದರಿಂದ ನಿಮ್ಮ ಭವಿಷ್ಯ ಹಾಳಾಗುವುದು ಬೇಡ ಎಂದು ಹೇಳಿದ್ದರು.
ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಮಹಿಳಾ ವೈದ್ಯೆಯ ಅತ್ಯಾಚಾರ-ಕೊಲೆಯನ್ನು ಖಂಡಿಸಿ, ನ್ಯಾಯಕ್ಕಾಗಿ ಪಟ್ಟು ಹಿಡಿದಿರುವ ವೈದ್ಯರಿಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವರಿಷ್ಠರು ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಇದನ್ನು ವಿರೋಧಿಸಿರುವ ಮಮತಾ ಬ್ಯಾನರ್ಜಿ, ಇದೆಲ್ಲವೂ ಶುದ್ಧ ಸುಳ್ಳು. ಕಿರಿಯ ವೈದ್ಯರ ವಿರುದ್ಧ ನಾನು ಒಂದೇ ಒಂದು ಪದವನ್ನೂ ಕೂಡ ಮಾತನಾಡಿಲ್ಲ ಎಂದರು.
ಇದನ್ನೂ ಓದಿ:ಅಪಘಾತದಲ್ಲಿ ಮೂವರು ಸಾವು
“ನಾನು ವೈದ್ಯಕೀಯ ವಿದ್ಯಾರ್ಥಿಗಳು ಅಥವಾ ಅವರ ಚಳುವಳಿಗಳ ವಿರುದ್ಧ ಒಂದೇ ಒಂದು ಪದವನ್ನು ಉಚ್ಚರಿಸಿಲ್ಲ ಎಂದು ಇಲ್ಲಿ ನಾನು ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ. ಅಡ್ಡಿಪಡಿಸುವೆ ಬದಲಿಗೆ ನಾನು ಅವರ ಚಳುವಳಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಅವರಿಗೆ ಎಂದಿಗೂ ಬೆದರಿಕೆ ಹಾಕಿಲ್ಲ. ಈ ಆರೋಪ ಸಂಪೂರ್ಣ ಸುಳ್ಳು. ಕೇಂದ್ರದ ಬೆಂಬಲದೊಂದಿಗೆ ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಮತ್ತು ಅರಾಜಕತೆ ಹಾಗೂ ಕಾನೂನುಬಾಹಿರತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬ್ಯಾನರ್ಜಿ ಹೇಳಿದರು,(ಏಜೆನ್ಸೀಸ್).
ಅಬ್ಬಾ! ಎಂತಹ ಜಾಗದಲ್ಲಿ ಅಡಗಿದೆ MH370 ವಿಮಾನ: ನಿಗೂಢ ನಾಪತ್ತೆ ಕೇಸ್​ ಬಗೆಹರಿದಿದೆ ಎಂದ ವಿಜ್ಞಾನಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × five =
Remember me
