ನವದೆಹಲಿ:ಜೆಡಿಎಸ್​ ವರಿಷ್ಠ, ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಇಂದು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಎನ್​ಡಿಎ ಮೈತ್ರಿಕೂಟದ ಜೊತೆ ಜೆಡಿಎಸ್​ ಸೇರಿಕೊಳ್ಳುವ ಕುರಿತು ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ. ಈ ಮೂಲಕ ಬಿಜೆಪಿ-ಜೆಡಿಎಸ್​ ಮೈತ್ರಿ ಇಂದು ಅಧಿಕೃತಗೊಂಡಿದೆ.
ಎನ್​ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿಕೊಳ್ಳುವ ನಿರ್ಧಾರ ಹೊರಬಿದ್ದ ಬಳಿಕ, ಬಿಜೆಪಿಯ ಹಲವಾರು ನಾಯಕರು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಂತೋಷವನ್ನು ವ್ಯಕ್ತಪಡಿಸಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇನ್ನು ಈ ಮೈತ್ರಿ ಕುರಿತು ಎಚ್​ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ನಿಖಿಲ್, ಸೀಟು ಹಂಚಿಕೆ ಹಾಗೂ ಇತರ ವಿಚಾರಗಳಿಗೆ ಸಂಬಂಧಿಸಿದಂತೆ ಈ ಮೈತ್ರಿ ಇನ್ನೂ ಅಷ್ಟು ಆಳಕ್ಕೆ ಹೋಗಿಲ್ಲ. ಆ ಕುರಿತ ಮಾತುಕತೆಗಳಿಗೆ ಇನ್ನೊಂದಷ್ಟು ಸಮಯ ಬೇಕಾಗುತ್ತದೆ ಎಂದು ಹೇಳಿದ್ದಾರೆ.
ನಮ್ಮ ಈ ನಿರ್ಧಾರ ಕರ್ನಾಟಕದ ಜನರ ಒಳಿತಿಗಾಗಿ ಎಂದಿರುವ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಜತೆ ಮೈತ್ರಿಗೆ ಸಂಬಂಧಿಸಿದ ಈ ನಿರ್ಧಾರ ಸದಾ ಜಾತ್ಯತೀತ ನಿಲುವು ಹೊಂದಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪಾಲಿಗೆ ಮಹತ್ವವಾದುದು ಎಂದಿದ್ದಾರೆ.
ಸಿದ್ದರಾಮಯ್ಯಗೆ ಅಡುಗೆ ಮಾಡಲು ಬರುತ್ತಾ? ಹೆಂಡ್ತಿ ಹತ್ರ ಸಿಎಂ ಯಾವತ್ತಾದ್ರೂ ಬೈಸಿಕೊಂಡಿದ್ರಾ?

ಮೋದಿ ವಾಟ್ಸ್​ಆ್ಯಪ್​ ಚಾನೆಲ್​ಗೆ ಒಂದೇ ದಿನದಲ್ಲಿ 10 ಲಕ್ಷಕ್ಕೂ ಅಧಿಕ ಫಾಲೋವರ್ಸ್; ಸಿಎಂಗಳ ಪೈಕಿ ಸಿದ್ದರಾಮಯ್ಯ ಮೊದಲಿಗರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fourteen =
Remember me
