ಗಾಜಿಯಾಬಾದ್:ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಮತಬೇಟೆಯಲ್ಲಿ ತೊಡಗಿವೆ. ಇನ್ನು ಕಾಂಗ್ರೆಸ್​ನ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಅಮೇಥಿ ಹಾಗೂ ರಾಯ್ಬರೇಲಿಯಿಂದ ಪಕ್ಷ ಈವರೆಗೆ ಯಾರನ್ನೂ ಕಣಕ್ಕಿಳಿಸಿಲ್ಲ. ದಿನದಿಂದ ದಿನಕ್ಕೆ ಈ ಎರಡು ಕ್ಷೇತ್ರಗಳ ಕುರಿತಾದ ಸಸ್ಪೆನ್ಸ್​ ಹೆಚ್ಚುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಹುಲ್​ ಗಾಂಧಿ ಕೊಟ್ಟಿರುವ ಉತ್ತರ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.
ಗಾಜಿಯಾಬಾದ್​ನಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ಧೇಶಿಸಿ ಮಾತನಾಡಿದ ರಾಹುಲ್​ ಗಾಂಧಿ ಅವರಿಗೆ ಪತ್ರಕರ್ತರೊಬ್ಬರು ನೀವು ಅಮೇಥಿ ಅಥವಾ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತೀರಾ ಎಂದು ಕೇಳುತ್ತಾರೆ. ಇದಕ್ಕೆ ಉತ್ತರಿಸಿದ ರಾಹುಲ್​, ಇದು ಬಿಜೆಪಿಯವರು ಕೇಳಬೇಕಾಗಿದ್ದ ಪ್ರಶ್ನೆ ಆದರೆ, ನೀವು ಕೇಳುತ್ತಿದ್ದೀರಾ ಎಂದು ಹೇಳಿದ್ದಾರೆ.
#WATCH| Ghaziabad, Uttar Pradesh: When asked whether he will contest the Lok Sabha elections from Amethi or Raebareli, Congress leader Rahul Gandhi says, "This is BJP's question, very good. Whatever order I will get, I will follow it. In our party, all these (selections of…pic.twitter.com/eI0Si8Q6QB
ಇದನ್ನೂ ಓದಿ:ಐಫೋನ್​ ಕೊಡಿಸಲಿಲ್ಲವೆಂದು ಮನೆ ಬಿಟ್ಟ ಬಾಲಕ; ಮುಗಿಲು ಮುಟ್ಟಿದ ಆಕ್ರಂದನ
ಪರವಾಗಿಲ್ಲ ಎಂದು ನಾನು ನಿಮ್ಮ ಪ್ರಶ್ನೆಗೆ ಉತ್ತರಿಸುತ್ತೇನೆ. ನಾನು ಅಮೇಥಿ ಅಥವಾ ರಾಯ್‌ಬರೇಲಿಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಪಕ್ಷದ ಆದೇಶವನ್ನು ನಾನು ಗೌರವಿಸುತ್ತೇನೆ ಎಂದು ಹೇಳುವ ಮೂಲಕ ರಾಹುಲ್​ ಗಾಂಧಿ ಅಮೇಥಿ ಅಥವಾ ರಾಯ್‌ಬರೇಲಿಯಲ್ಲಿ ಸ್ಪರ್ಧಿಸುವುದಾಗಿ ಪರೋಕ್ಷ ಸುಳಿವು ನೀಡಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಅಮೇಥಿಯಿಂದ ಮತ್ತು ಪ್ರಿಯಾಂಕಾ ಗಾಂಧಿ ರಾಯ್ಬರೇಲಿಯಿಂದ ಸ್ಪರ್ಧಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಇವರಿಬ್ಬರು ಅಮೇಥಿ ಹಾಗೂ ರಾಯ್ಬರೇಲಿಯಿಂದ ಸ್ಪರ್ಧಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಕಾಂಗ್ರೆಸ್​ ನಾಯಕ ಜೈರಾಮ್​ ರಮೇಶ್​ ಹೇಳಿಕೆ ನೀಡಿದ್ದರು. ಇತ್ತ ಜೈರಾಮ್​ ರಮೇಶ್​ ಬೆನ್ನಲ್ಲೇ ರಾಹುಲ್​ ಗಾಂಧಿ ಹೇಳಿಕೆ ನೀಡಿರುವುದು ಹಲವು ವಿಚಾರಗಳಿಗೆ ಪುಷ್ಠಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
