ಅಯೋಧ್ಯೆ:ರಾಮಮಂದಿರ ಭೂಮಿ ಪೂಜೆ ಹತ್ತಿರ ಬರುತ್ತಿದೆ. 200 ಮಂದಿಗೆ ಮಾತ್ರ ಆಮಂತ್ರಣ ಪತ್ರಿಕೆ ನೀಡಲಾಗುತ್ತಿದೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ಹೇಳಿದೆ.
ಆದರೆ ರಾಮಮಂದಿರ ನಿರ್ಮಾಣದ ವಿಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿ ಹಿರಿಯ ನಾಯಕ ಎಲ್​.ಕೆ.ಆಡ್ವಾಣಿ ಅವರಿಗೆ ಆಹ್ವಾನ ನೀಡುತ್ತಿಲ್ಲ. ಅವರು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬ ಸುದ್ದಿ ಕುತೂಹಲಕ್ಕೆ ಕಾರಣವಾಗಿತ್ತು.ಆದರೆ ಎಲ್​.ಕೆ.ಆಡ್ವಾಣಿಯವರಿಗೆ ಭೂಮಿ ಪೂಜೆಗೆ ಯಾಕೆ ಆಹ್ವಾನ ನೀಡಲಾಗುತ್ತಿಲ್ಲ ಎಂಬುದನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಚಂಪತ್​ ರಾಯ್​ ಅವರು ತಿಳಿಸಿದ್ದಾರೆ.
ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಆಡ್ವಾಣಿಯವರ ಪಾತ್ರ ದೊಡ್ಡದು. ಅವರಿಗೆ ಆಹ್ವಾನ ನೀಡದೆ ಇರುವುದಕ್ಕೆ ಕರೊನಾ ವೈರಸ್​ ನಿಯಂತ್ರಣಾ ಮಾರ್ಗಸೂಚಿ ಕಾರಣ ಹೊರತು ಬೇರೇನೂ ಇಲ್ಲ. ಭೂಮಿಪೂಜೆ ಸಮಾರಂಭದಲ್ಲಿ 90 ವರ್ಷಕ್ಕಿಂತ ಮೇಲ್ಪಟ್ಟವರು ಯಾರೂ ಪಾಲ್ಗೊಳ್ಳುವಂತಿಲ್ಲ. ಹಾಗೇ, ಆಡ್ವಾಣಿಯವರಿಗೆ 92ವರ್ಷವಾಗಿದೆ. ಅವರು ಹೇಗೆ ಇಲ್ಲಿಗೆ ಆಗಮಿಸುತ್ತಾರೆ? ಎಂದು ಚಂಪತ್​ ರಾಯ್​ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.ಇದನ್ನೂ ಓದಿ:ರಾಜ್ಯದಲ್ಲಿ ಇಂದಿನ ಹೊಸ ಕರೊನಾ ಪ್ರಕರಣಗಳು, ಡಿಸ್​ಚಾರ್ಜ್​ ಆದವರ ಸಂಖ್ಯೆ 4000ಕ್ಕೂ ಅಧಿಕ
ದೇಶದಲ್ಲಿ ಅನ್​ಲಾಕ್​ ಜಾರಿಯಲ್ಲಿದ್ದರೂ ವಯಸ್ಸಾದವರು ಮನೆಯಲ್ಲೇ ಇರಿ ಎಂದು ಸರ್ಕಾರ ಹೇಳಿದೆ. ಮಾರ್ಗಸೂಚಿಯಲ್ಲೂ ಅದನ್ನೇ ಉಲ್ಲೇಖ ಮಾಡಲಾಗಿದೆ. ಅಯೋಧ್ಯೆಯಲ್ಲಿ ಇತ್ತೀಚೆಗೆ ಹಲವು ಕರೊನಾ ಕೇಸ್​ಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಲ್​.ಕೆ.ಆಡ್ವಾಣಿ, ಮುರಳಿ ಮನೋಹರ್​ ಜೋಶಿ ಭೂಮಿಪೂಜೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಟ್ರಸ್ಟ್​ ಮೂಲಗಳು ತಿಳಿಸಿವೆ.ಇದನ್ನೂ ಓದಿ:ಪ್ರಧಾನಿ ಮೋದಿಯವರಿಗೆ ಯಾವುದೇ ತೊಂದರೆಯಾಗದಿರಲಿ ಎಂದು ಹಾರೈಸುತ್ತೇನೆ: ಶಿವಸೇನೆ ಮುಖಂಡ ಸಂಜಯ್​ ರಾವತ್​
ಹಾಗೇ ಚಂಪತ್​ ರಾಯ್​ ಅವರು ಭೂಮಿಪೂಜೆಗೆ ಆಗಮಿಸುವವರಿಗೆ ಮೊಬೈಲ್​ ತರಲು ಅವಕಾಶ ಇರುತ್ತದೆ. ಆದರೆ ಬ್ಯಾಗ್​ಗಳನ್ನು ತರಲು ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಆಮಂತ್ರಣ ಪತ್ರಿಕೆ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಹಾಗೇ ಪ್ರತಿ ಕಾರ್ಡ್​ ಮೇಲೆಯೂ ಒಂದು ಕೋಡ್​ ಇರುತ್ತದೆ. ಇದರಿಂದಾಗಿ ಒಂದು ಕಾರ್ಡ್​ ಆಧಾರದ ಮೇಲೆ ಓರ್ವರಿಗೆ ಮಾತ್ರ ಪ್ರವೇಶ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)
‘ಪ್ರೀತಿಸುವುದನ್ನು..ಸತ್ಯ ಹೇಳುವುದನ್ನು, ತಾಳ್ಮೆಯಿಂದ ಇರುವುದನ್ನು ಕಲಿತಿದ್ದೇ ನನ್ನ ಸೋದರನಿಂದ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
