ಒಡಿಶಾ:ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು ಸಾವಿನ ಸಂಖ್ಯೆ 300ಕ್ಕೆ ಏರಿಕೆಯಾಗಿದೆ.
ರೈಲು ಅಪಘಾತದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪ್ರಯಾಣಿರು ಗಾಯಗೊಂಡಿದ್ದು ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ. ಬಳಿಕ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.
#WATCH| Odisha: PM Narendra Modi visits a hospital in Balasore to meet the injured victims of#OdishaTrainTragedy.pic.twitter.com/vP5mlj1lEC— ANI (@ANI)June 3, 2023
#WATCH| Odisha: PM Narendra Modi visits a hospital in Balasore to meet the injured victims of#OdishaTrainTragedy.pic.twitter.com/vP5mlj1lEC
ಇದನ್ನೂ ಓದಿ:ಒಡಿಶಾ ರೈಲು ದುರಂತ; ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ದುರಂತದಿಂದ ಅತೀವ್ ದುಃಖವಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ ಎಂದು ಹೇಳಿದ್ಧಾರೆ.
ರೈಲು ಅಪಘಾತ ಒಂದು ಗಂಭೀರ ಘಟನೆಯಾಗಿದ್ದು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಘಟನೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು ರೈಲ್ವೆ ಇಲಾಖೆಯೂ ಹಳಿಯ ರಿಪೇರಿ ಕಾರ್ಯ ಶುರು ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿ ಗಾಯಾಳುಗಳ ಭೇಟಿ ಬಳಿಕ ತಿಳಿಸಿದ್ದಾರೆ.
#WATCH| “It’s a painful incident. Govt will leave no stone unturned for the treatment of those injured. It’s a serious incident, instructions issued for probe from every angle. Those found guilty will be punished stringently. Railway is working towards track restoration. I met…pic.twitter.com/ZhyjxXrYkw— ANI (@ANI)June 3, 2023

#WATCH| “It’s a painful incident. Govt will leave no stone unturned for the treatment of those injured. It’s a serious incident, instructions issued for probe from every angle. Those found guilty will be punished stringently. Railway is working towards track restoration. I met…pic.twitter.com/ZhyjxXrYkw
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + seven =
Remember me
