ಮುಂಬೈ:ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಇದನ್ನು ಓದಿ:ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಎನ್​ಸಿಪಿ ನಾಯಕ ಶರದ್​ ಪವಾರ್​​; ಕಾರಣ ಏನು ಗೊತ್ತಾ?
ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಹೋರಾಟವಾಗಿದೆ. ಸದ್ಯದಲ್ಲೇ ವಿಧಾನಸಭೆ ಚುನಾವಣೆ ಬರಲಿದೆ. ಈ ಸರ್ಕಾರ ಮೋದಿ ಸರ್ಕಾರವಾಗಿದೆ. ಈ ಸರ್ಕಾರ ಎಷ್ಟು ದಿನ ಇರುತ್ತೋ ಕಾದು ನೋಡಬೇಕಿದೆ ಎಂದರು. ಏಕನಾಥ್ ಶಿಂಧೆ ಪಾಳಯದಿಂದ ನಾಯಕರನ್ನು ಹಿಂದಕ್ಕೆ ತೆಗೆದುಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಿದ ಅವರು, ನನ್ನನ್ನು ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.
ಎಂವಿಎ ನಕಲಿ ನಿರೂಪಣೆಯನ್ನು ಬಳಸಿದೆ ಎಂಬ ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿದ ಠಾಕ್ರೆ , ಮೋದಿ ಬಳಸಿದ ನಿರೂಪಣೆ ಏನು? ಮಂಗಳಸೂತ್ರ ಬಗ್ಗೆ ಏನು? ಇದು ಸರಿಯೇ? ಬಿಜೆಪಿಯೇ 400 ಎಂಬ ಘೋಷವಾಕ್ಯವನ್ನು ನೀಡಿತು. ಒಳ್ಳೆಯ ದಿನಗಳ ನಿರೂಪಣೆ ಏನಾಯಿತು, ಅಚ್ಛೇ ದಿನ್​, ಮೋದಿ ಗ್ಯಾರಂಟಿ ಏನಾಯಿತು ಎಂದು ಪ್ರಶ್ನಿಸಿದ್ದಾರೆ. (ಏಜೆನ್ಸೀಸ್​​)
ಮೋದಿ ಸರ್ಕಾರ ಪತನವಾಗಲಿದೆ ಎಂದಿದ್ದೇಕೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six + seven =
Remember me
