ನವದೆಹಲಿ:ಏಷ್ಯಾ ಮತ್ತು ಆಫ್ರಿಕಾ ಖಂಡದಲ್ಲಿ ಭಯೋತ್ಪಾದನಾ ಚಟುವಟಿಕೆ ಜಾಗತಿಕವಾಗಿ ಬೆಳೆಯುತ್ತಿದೆ. ಭಯೋತ್ಪಾದನೆಯ ವಿಸ್ತಾರ ಹೆಚ್ಚಾಗುತ್ತಿದ್ದು, ಇದು ಮಾನವೀಯತೆಯ ಮೌಲ್ಯಕ್ಕೆ ಬೆದರಿಕೆಯೊಡ್ಡುತ್ತಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ್ ಅಭಿಪ್ರಾಯ ಪಟ್ಟಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಭಯೋತ್ಪಾದನಾ ವಿರೋಧಿ ಸಭೆಯಲ್ಲಿ ಎಸ್. ಜೈಶಂಕರ್ ಮಾತನಾಡುತ್ತಾ, ಭಯೋತ್ಪಾದನಾ ಚಟುವಟಿಕೆ ಸಾರವಜನಿಕ ವಲಯದಲ್ಲಿ ಭಯದ ವಾತಾವರಣ ನಿರ್ಮಾಣಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಕಳೆದ ಎರಡು ವರ್ಷಗಳಿಂದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಭಯೋತ್ಪಾದನಾ ಚಟುವಟಿಕೆಯನ್ನು ಹತ್ತಿಕ್ಕಲು ಬೇಕಾದಂತಹ ಕೆಲಸ ಮಾಡುತ್ತಿದೆ. ಇದು ಭಯೋತ್ಪಾದನೆಯನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ದೇಶಗಳಿಗೆ ಕಂಠಕವಾಗಲಿದೆ ಎಂದು ಹೇಳಿದರು.
ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು, ತಂತ್ರಜ್ಞಾನದ ಮೂಲಕ ನಡೆಯುತ್ತಿದೆ. ಭಯೋತ್ಪಾದನಾ ಪಿತೂರಿ, ಉಗ್ರಗಾಮಿ ಚಟುವಟಿಕೆ ಸಂದೇಶಗಳು ಸಾಮಾಜಿಕ ಮಾಧ್ಯಮಗಳ ಮೂಲಕ ರವಾನೆಯಾಗುತ್ತಿದೆ. ಸಾಮಾಜಿಕ ಜಾಲತಾಣಗಳು ಇಂದು ಭಯೋತ್ಪಾದಕರ ಪ್ರಬಲ ಸಾಧನವಾಗಿ ಮಾರ್ಪಟ್ಟಿವೆ ಎಂದು ಸಚಿವ ಎಸ್. ಜೈಶಂಕರ್ ಹೇಳಿದರು.(ಏಜೆನ್ಸೀಸ್)
"Threat of terrorism is growing…" Jaishankar at top UN counter-terror meetRead@ANIStory |https://t.co/bz7VaeWbJy#UN#Jaishankar#terrorism#UNSC#India#UnitedNationspic.twitter.com/B3itdM7dsr— ANI Digital (@ani_digital)October 29, 2022
"Threat of terrorism is growing…" Jaishankar at top UN counter-terror meetRead@ANIStory |https://t.co/bz7VaeWbJy#UN#Jaishankar#terrorism#UNSC#India#UnitedNationspic.twitter.com/B3itdM7dsr
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
