ಲಖನೌ:ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್​ನ ಲೋನಿ ಪ್ರದೇಶದಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಘಾಜಿಯಾಬಾದ್​ ಗ್ರಾಮೀಣ ಡಿಸಿಪಿ ವಿವೇಕ್​ಚಂದ್​ ಯಾದವ್ ಘಟನೆ ಶನಿವಾರ ರಾತ್ರಿ 11:30ರ ಸುಮಾರಿಗೆ ನಡೆದಿದೆ. ಬಿಲ್ಡಿಂಗ್​ನ ಮಾಲೀಕ ಶಕೀಲ್​ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ಶಾರಿಖ್​ ಎಂಬಾತನಿಗೆ ಮನೆಯನ್ನು ಬಾಡಿಗೆ ನೀಡಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಸೊಮಾಲಿಯಾದಲ್ಲಿ ಆತ್ಮಾಹುತಿ ಬಾಂಬ್​ ದಾಳಿ; 13 ಮಂದಿ ಮೃತ್ಯು
ಘಟನೆಯಲ್ಲಿ ಇಮ್ರಾನ್​ (16), ಫರ್ದೀನ್​ (18), ಆಲೀನಾ (12) ಮೃತಪಟ್ಟಿದ್ದಾರೆ. ಮೆವಿಸ್​ (45), ಶೈಸ್ತಾ (40), ಆಲಿಶಾ (10), ನಾರ್ರಿ (18) ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡುಗೆ ಮಾಡುವ ವೇಳೆ ಸಿಲಿಂಡರ್​ ಸ್ಪೋಟಗೊಂಡ ಪರಿಣಾಮ ದುರಂತ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಮನೆಯಲ್ಲಿ ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸಲಾಗುತ್ತಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಈ ಸಂಬಂಧ ಪರಿಶೀಲನೆಗೆಂದು ಫೋರೆನ್ಸಿಕ್​ ಹಾಗೂ ಶ್ವಾನದಳವನ್ನು ಸ್ಥಳಕ್ಕೆ ಕರೆಸಲಾಗಿದ್ದು, ಅವರು ನೀಡುವ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಘಾಜಿಯಾಬಾದ್​ ಗ್ರಾಮೀಣ ಡಿಸಿಪಿ ವಿವೇಕ್​ಚಂದ್​ ಯಾದವ್ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − fourteen =
Remember me
