ನವದೆಹಲಿ:ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಇದೀಗ ಓಲ್ಡ್​ ರಾಜೀಂದರ್​ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿದ್ದು, ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಜೀಂದರ್​ ನಗರದಲ್ಲಿ  ಭಾರಿ ಪ್ರವಾಹದ ಸ್ಥಿತಿ ಉಂಟಾಗಿದೆ. ಇದರಿಂದಾಗಿ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ನ ಬೇಸ್​ಮೆಂಟ್​ಗೆ ನೀರು ನುಗ್ಗಿದ ಕಾರಣ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇಬ್ಬರ ಶವವನ್ನ ಹೊರತೆಗೆಯಲಾಗಿದ್ದು, ಓರ್ವ ವಿದ್ಯಾರ್ಥಿಯ ಶವಕ್ಕೆ ಹುಡುಕಾಟ ಮುಂದುವರೆಸಲಾಗಿದೆ. ಮೂವರು ವಿದ್ಯಾರ್ಥಿಗಳು ಕೂಡ ಐಎಎಸ್‌ ಅಧಿಕಾರಿಯಾಗುವ ಕನಸು ಕಂಡಿದ್ದರು. ಮೃತಪಟ್ಟಿರುವ ವಿದ್ಯಾರ್ಥಿಗಳ ಬಗ್ಗೆ ಹಚ್ಚಿನ ವಿವರ ತಿಳಿದು ಬಂದಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಕುರಿತು ಮಾತನಾಡಿರುವ ದೆಹಲಿ ಡಿಸಿಪಿ ಎಂ. ಹರ್ಷವರ್ಧನ್‌, ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಕೋಚಿಂಗ್‌ ಸೆಂಟರ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದೆ. ನೆಲಮಹಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಹೊರಬರಲು ಆಗದೆ, ಮೇಲಿನ ಮಹಡಿಗೂ ಹೋಗಲು ಆಗದೆ ನೀರಿನಲ್ಲೇ ಸಿಲುಕಿ ಮೃತಪಟ್ಟಿದ್ದಾರೆ.  ಕೂಡಲೇ ಎನ್‌ಡಿಆರ್‌ಎಫ್‌ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಈಗಲೂ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
दिल्ली में यूपीएससी के मक्का ओल्ड राजेंद्र नगर में राव IAS एकेडमी के बेसमेंट में पानी घुसने से कई छात्रों की जान चली गई!#RajendraNagar#DelhiRains#Delhi#OlympicGamesParis2024pic.twitter.com/bEzF85A6Wp
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
