ನವದೆಹಲಿ:ಯಮುನಾ ನದಿಯ ನೀರಿನ ಮಟ್ಟವು ವೇಗವಾಗಿ ಏರುತ್ತಿದ್ದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪರಿಸ್ಥಿತಿ ಭೀಕರವಾಗಿದೆ. ಈಗಾಗಲೇ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮುಂದಿನ 4-5 ದಿನಗಳವರೆಗೆ ದೆಹಲಿಯಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶುಕ್ರವಾರ ರಾತ್ರಿ 8 ಗಂಟೆಯ ವೇಳೆಗೆ ಯಮುನಾ ನದಿಯು ಅಪಾಯದ ಮಟ್ಟಕ್ಕಿಂತ 3 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದು, ಈ ಮೂಲಕ 45 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ.

ಯಮುನಾದಲ್ಲಿ ಅಪಾಯದ ಮಟ್ಟ 205.33 ಆಗಿದ್ದರೆ, ಯಮುನಾದಲ್ಲಿ ನೀರಿನ ಮಟ್ಟವು ಪ್ರಸ್ತುತ 208.12ರಷ್ಟಿದೆ. ಅದೃಷ್ಟವಶಾತ್, ನೀರಿನ ಮಟ್ಟವು ಕಡಿಮೆಯಾಗಲು ಪ್ರಾರಂಭಿಸಿದೆ. ಆದರೂ, ದೆಹಲಿಯ ತಗ್ಗು ಪ್ರದೇಶಗಳ ನಿವಾಸಿಗಳು ಮತ್ತೆ ಭಾರಿ ಮಳೆಯ ಮುನ್ಸೂಚನೆ ಬಂದಿರುವುದರಿಂದ ಚಿಂತಿತರಾಗಿದ್ದಾರೆ.


ದೆಹಲಿ ಪ್ರವಾಹದ ಈವರೆಗೆ ಮೂವರು ಮಕ್ಕಳನ್ನು ಬಲಿ ಪಡೆದಿದೆ. ವಾಯುವ್ಯ ದೆಹಲಿಯ ಮುಕುಂದಪುರ ಪ್ರದೇಶದಲ್ಲಿ  ಜು.13 ರಂದು (ಶುಕ್ರವಾರ) 12ರಿಂದ 15 ವರ್ಷದೊಳಗಿನ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದೆಹಲಿಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳನ್ನು ನಿಯೋಜಿಸಲಾಗಿದ್ದು ಅವರು ತಗ್ಗು ಪ್ರದೇಶಗಳ ನಿವಾಸಿಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದ್ದಾರೆ.

“ದೆಹಲಿ ಮಾತ್ರವಲ್ಲ, ಉತ್ತರ ಭಾರತದ ಇತರ ರಾಜ್ಯಗಳಲ್ಲೂ ಪರಿಸ್ಥಿತಿ ಭೀಕರವಾಗಿದೆ. ಭಾರಿ ಮಳೆ ಮತ್ತು ಭೂಕುಸಿತವು ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹರಿಯಾಣದ ಹಟ್ನಿಕುಂಡ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ ಪರಿಣಾಮವಾಗಿ, ಯಮುನಾದಲ್ಲಿನ ನೀರಿನ ಮಟ್ಟವು ಅಪಾಯದ ಮಟ್ಟಕ್ಕಿಂತ ಮೂರು ಮೀಟರ್ ಹೆಚ್ಚಾಗಿದೆ. ಅದಲ್ಲದೇ ನವದೆಹಲಿಯ ಅನೇಕ ಪ್ರಮುಖ ರಸ್ತೆಗಳು  ಮಳೆ ನೀರಿನ ಕಾರಣದಿಂದಾಗಿ ಮುಚ್ಚಲ್ಪಟ್ಟಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಮಳೆ ನೀರು ನಿಂತಿರುವ ಕಾರಣ ಕೆಲ ಪ್ರದೇಶಗಳು ನಡುಗಡ್ಡೆಯ ರೀತಿ ಪರಿವರ್ತನೆ ಆಗಿವೆ.(ಏಜೆನ‍್ಸೀಸ್‍)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − four =
Remember me
