ಮೊರೆನಾ:ಭೀಕರ ಅಪಘಾತವೊಂದರಲ್ಲಿ ಕನಿಷ್ಠ ಮೂರು ಜನರು ಮೃತಪಟ್ಟು, ಏಳು ಜನರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಬಳಿ ನಡೆದಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ನಡೆದ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ವಿಚಿತ್ರ ಸಿಕ್ತು ತಿರುವು! ಇಬ್ಬರ ಜಗಳಕ್ಕೆ ಪೊಲೀಸರಿಗೆ ಪೀಕಲಾಟ…ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಗ್ವಾಲಿಯರ್‌ನಿಂದ ದೆಹಲಿಗೆ ತೆರಳುತ್ತಿತ್ತು. ದಾಮೋಹ್-ಜಬಲ್‌ಪುರ ರಾಜ್ಯ ಹೆದ್ದಾರಿಯ ನೋಹ್ರಾ ಪೊಲೀಸ್ ಠಾಣೆಯ ಹತ್ತಿ ಗ್ರಾಮದ ಬಳಿ ರಸ್ತೆಬದಿಯಲ್ಲಿ ಕಂಟೈನರ್​ವೊಂದು ನಿಂತಿತ್ತು. ಈ ವೇಳೆ ಬಸ್‌ ಕಂಟೇನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಮುಂಭಾಗಕ್ಕೆ ತೀವ್ರ ಹಾನಿಯಾಗಿದೆ. ಇದರಿಂದಾಗಿ ಮೂವರು ಮೃತಪಟ್ಟು 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಈ ಕುರಿತು ಮಾತನಾಡಿರುವ ಪೊಲೀಸರು, ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ. ಘಟನೆಯ ವೇಳೆ ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಂದಾಜಿಲಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಶೈಲೇಂದ್ರ ಸಿಂಗ್ ಚೌಹಾಣ್ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
