ಮಣಿಪುರ:ಗಲಭೆ ಪೀಡಿತ ಮಣಿಪುರದಲ್ಲಿ ರಕ್ತಪಾತ ಮುಂದುವರೆದಿದ್ದು, ಉಖ್ರುಲ್​​​​ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಕುಕಿ ಸಮುದಾಯಕ್ಕೆ ಸೇರಿದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದೆ.
ಕುಕಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಉಖ್ರುಲ್​​ ಜಿಲ್ಲೆಯ ಥೋವೈ ಕುಕಿ ಎಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪೊಂದು ಏಕಾಏಕಿ ಹಳ್ಳಿಗೆ ನುಗ್ಗಿ ಮೂವರ ಮೇಲೆ ದಾಳಿ ನಡೆಸಿದ್ದಾರೆ. ಮೃತರು ತಮ್ಮ ಹಳ್ಳಿಯ ಮೇಲೆ ಮೈತೇಯಿ​ ಸಮುದಾಯದವರು ನಡೆಸಲು ಉದ್ದೇಶಿಸಿದ ದಾಳಿಯನ್ನು ವಿಫಲಗೊಳಿಸಲು ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಿಂಗ್ಶೆಂ ವಶುಂ ಘಟನೆಯೂ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದೆ. ವಿಚಾರ ತಿಳಿದು ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳುವ ವೇಳೆಗಾಗಲೇ ಆರೋಪಿಗಳು ಪರಾರಿಯಾಗಿದ್ದರು. ಆರೋಪಿಗಳ ಹುಡುಕಾಟಕ್ಕೆ ತಂಡವನ್ನು ರಚಿಸಲಾಗಿದೆ.
ಇದನ್ನೂ ಓದಿ:ಕರ್ನಾಟಕದಲ್ಲೇ ಮೊದಲು NEP ಜಾರಿ ಮಾಡುವ ತರಾತುರಿ ಏನಿದೆ: ಡಿ.ಕೆ. ಶಿವಕುಮಾರ್​
ನಾಗಾ ಸಮುದಾಯದವರು ಹೆಚ್ಚಾಗಿ ವಾಸಿಸುವ ಉಖ್ರುಲ್​ ಜಿಲ್ಲೆಯಲ್ಲಿ ಕುಕಿ-ಮೈತೇಯಿ ಹಿಂಸಾಚಾರದಿಂದ ಅಂತರ ಕಾಯ್ದುಕೊಂಡಿದ್ದಾರೆ. ಹೀಗಾಗಿ ಆರೋಪಿಗಳು ಮೂವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಶಂಕಿತ ಆರೋಪಿಗಳು ಮೈತೇಯಿ ಸಮುದಾಯದವರಿರಬಹುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಿಂಗ್ಶೆಂ ವಶುಂ ಹೇಳಿದ್ದಾರೆ.
ಮೇ 3ರಂದು ಮೈತೇಯಿ-ಕುಕಿ ಸಮುದಾಯದ ನಡುವೆ ಸಂಭವಿಸಿದ ಜನಾಂಗೀಯ ಘರ್ಷಣೆಯಲ್ಲಿ 60 ಸಾವಿರಕ್ಕೂ ಹೆಚ್ಚಿನ ಜನರು ಆಶ್ರಯ ಕಳೆದುಕೊಂಡಿದ್ದು, 160ಕ್ಕೂ ಹೆಚ್ಚಿನ ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − thirteen =
Remember me
