ಪಟನಾ :ಬಿಹಾರದ ಗಯಾ ಜಿಲ್ಲೆಯ ಬಾರಾಚಟ್ಟಿ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ವೇಳೆ ಭಾನುವಾರ ನಸುಕಿನಲ್ಲಿ ಎನ್​ಕೌಂಟರ್ ಸಂಭವಿಸಿದ್ದು, ಭದ್ರತಾಪಡೆಗಳ ಗುಂಡಿಗೆ ಮೂವರು ನಕ್ಸಲರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟನಾದಿಂದ 100 ಕಿ.ಮೀ. ಅಂತರದಲ್ಲಿರುವ ಗಯಾ ಜಿಲ್ಲೆ ನಕ್ಸಲ್ ಪೀಡಿತವಾಗಿದ್ದು, ನಕ್ಸಲ್ ನಿಗ್ರಹ ಕಾರ್ಯಾಚರಣೆ ಚಾಲ್ತಿಯಲ್ಲಿದೆ. ನಕ್ಸಲರ ಇರುವಿಕೆಯ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗೆ ನಕ್ಸಲರು ಅರಣ್ಯ ಪ್ರದೇಶದಲ್ಲಿ ಮುಖಾಮುಖಿಯಾಗಿದ್ದು, ಗುಂಡಿನ ದಾಳಿ ಆರಂಭಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಸ್ಥಳ ತಪಾಸಣೆ ನಡೆಸಿದಾಗ ಮೂವರು ನಕ್ಸಲರ ಶವ ಪತ್ತೆಯಾಗಿದೆ.
ಇದನ್ನೂ ಓದಿ:ತ್ಯಾಜ್ಯ ನಿರ್ವಹಣೆಗೆ ಪ್ರತ್ಯೇಕ ಮಂಡಳಿ – ನಾಳೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ
ಘಟನಾ ಸ್ಥಳದಿಂದ ಎಕೆ ಸೀರೀಸ್​ ನ ಅಸಾಲ್ಟ್ ರೈಫಲ್​, ಇನ್​ಸಾಸ್ ರೈಫಲ್​ ಪತ್ತೆಯಾಗಿದ್ದು, ಭದ್ರತಾಪಡೆ ಅವುಗಳನ್ನು ವಶಪಡಿಸಿಕೊಂಡಿದೆ. ಕೋಬ್ರಾ ಬೆಟಾಲಿಯನ್ ಈ ಕಾರ್ಯಾಚರಣೆ ನಡೆಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
ಚಿನ್ನದಂಗಡಿ ದರೋಡೆ ಕೇಸ್​​ – ಖದೀಮರ ಗ್ಯಾಂಗ್​ನಲ್ಲಿ ಇಬ್ಬರು ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + nineteen =
Remember me
