ಉತ್ತರಪ್ರದೇಶದ:ಗುರುವಾರ (ಸೆ.14) ತಡರಾತ್ರಿ ಒಂದೇ ಕುಟುಂಬದ ಮೂವರನ್ನು ಕಿಡಿಗೇಡಿಗಳು ಗುಂಡಿಟ್ಟು ಹತ್ಯೆಗೈದ ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯ ಮೊಹಿಯುದ್ದೀನ್‌ಪುರ ಗ್ರಾಮದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ನೂರು ರೂ. ಕೊಟ್ಟು 2 ಮಾಂಗಲ್ಯ ಸರ ಸುಲಿಗೆ: ಖದೀಮರ ವಿನೂತನ ಕೈಚಳಕಕ್ಕೆ ಬೆಚ್ಚಿಬಿದ್ದ ಆನೇಕಲ್ ಮಂದಿ
ತಂದೆ, ಮಗಳು ಹಾಗೂ ಅಳಿಯನನ್ನು ಗುಂಡಿಕ್ಕಿ ಹತ್ಯೆಗೈದ ಕಿಡಿಗೇಡಿಗಳು ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ಊರಿನ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ, ಸಂದೀಪನ್ ಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕೌಶಂಬಿ ಜಿಲ್ಲೆಯ ಮೊಹಿಯುದ್ದೀನ್‌ಪುರ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಹತ್ಯೆಯ ಹಿಂದೆ ಜಮೀನು ವಿವಾದದ ಸಂಘರ್ಷವೇ ಕಾರಣ ಎಂದು ತಿಳಿಸಿದೆ. ಸದ್ಯ ಇಲ್ಲಿಯವರೆಗೂ ಪ್ರಕರಣದಲ್ಲಿ ಯಾವುದೇ ಆರೋಪಿಯನ್ನು ಬಂಧಿಸಿಲ್ಲ.
ಇದನ್ನೂ ಓದಿ:ನಾಳೆ ರೆಡ್ಡಿ ಜನ ಸಂಘದಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭ
ಕಿಡಿಗೇಡಿಗಳು ಹತ್ಯೆಗೈದ ಘಟನೆ ತಿಳಿದ ಗ್ರಾಮಸ್ಥರು, ಸಂತ್ರಸ್ತರ ಶವಗಳನ್ನು ನೋಡಿ ಕುಪಿತಗೊಂಡು ಸುತ್ತಮುತ್ತಲಿನ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸ್​ ಇಲಾಖೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದೆ.
#WATCH| Kaushambi, UP: A triple murder took place over a land dispute in Kaushambi. All the victims were from the same family. Enraged people set fire to many houses.
Superintendent of Police at Kaushambi, Brijesh Srivastava says, "…The names of four people have come out as…pic.twitter.com/uV91hInDu0
— ANI UP/Uttarakhand (@ANINewsUP)September 15, 2023

“ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಹೆಸರುಗಳು ಕೇಳಿಬಂದಿವೆ. ಈಗ ಅವರು ತಲೆಮರೆಸಿಕೊಂಡಿದ್ದಾರೆ, ಶೀಘ್ರವೇ ಅವರನ್ನು ಹುಡುಕಿ, ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಿದ್ದೇವೆ” ಎಂದು ಕೌಶಂಬಿಯ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಹೇಳಿದ್ದಾರೆ,(ಏಜೆನ್ಸೀಸ್).
ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × 4 =
Remember me
