ನವದೆಹಲಿ: ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್​ ಕುಮಾರ್ ದೇಬ್​ ಅವರನ್ನು ಆಗಂತುಕರು ಕೊಲೆ ಮಾಡಲು ಯತ್ನಿಸಿದ್ದು, ಅವರು ಸಂಜೆ ವಾಯುವಿಹಾರದಲ್ಲಿ ಇದ್ದಾಗಲೇ ಈ ಘಟನೆ ಸಂಭವಿಸಿದೆ. ಮುಖ್ಯಮಂತ್ರಿ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಕೊಲೆಯತ್ನ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಸಿಎಂ ಬಿಪ್ಲಬ್​ ಕುಮಾರ್ ದೇಬ್​ ಅವರು ಗುರುವಾರ ಸಂಜೆ ತಮ್ಮ ಅಧಿಕೃತ ನಿವಾಸ ಶ್ಯಾಮ್​ಪ್ರಸಾದ್​ ಮುಖರ್ಜಿ ಲೇನ್​ನಲ್ಲಿ ವಾಯುವಿಹಾರ ನಡೆಯುತ್ತಿದ್ದ ಈ ಕೊಲೆಯತ್ನ ನಡೆದಿದೆ. ಮುಖ್ಯಮಂತ್ರಿ ಅವರ ಭದ್ರತೆಯನ್ನು ಭೇದಿಸಿ ಕಾರನ್ನು ಅವರ ಮೇಲೆ ಹರಿಸಲು ಯತ್ನಿಸಲಾಗಿತ್ತು.
ಕೂಡಲೇ ಎಚ್ಚೆತ್ತ ಸಿಎಂ, ತಕ್ಷಣ ಪಕ್ಕಕ್ಕೆ ಸರಿದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಆದರೆ ಭದ್ರತಾ ಸಿಬ್ಬಂದಿಯಲ್ಲಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದುಷ್ಕೃತ್ಯಕ್ಕೆ ಮುಂದಾದವರನ್ನು ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದಿದ್ದು, ಅವರ ವಿರುದ್ಧ ಕೊಲೆಯತ್ನ ಕೇಸ್​ದಾಖಲಿಸಿಕೊಂಡಿದ್ದಾರೆ. (ಏಜೆನ್ಸೀಸ್​)
ಕಾರವಾರದ ಯುವತಿ, ಗೋವಾದ ಯುವಕನ ನಿಶ್ಚಿತಾರ್ಥ; ಗಡಿಯಲ್ಲಿ ಎರಡು ಗಂಟೆಗೂ ಅಧಿಕ ಕಾಲ ಪರದಾಟ!

ಸಾವಿಗೆ ವೈದ್ಯರೇ ಕಾರಣ, ಅವರನ್ನು ಬಂಧಿಸಿ; ಹೆರಿಗೆ ವೇಳೆ ಸತ್ತ ಗರ್ಭಿಣಿಯ ಸಂಬಂಧಿಕರ ಆಗ್ರಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
