ಚಂಡೀಗಢ:ಪಂಜಾಬ್​ನ ಬಠಿಂಡಾ ಮತ್ತು ದೆಹಲಿ ಖಾಲಿಸ್ತಾನ್ ಪರ ಘೋಷಣೆಗಳನ್ನು ಬರೆದ ಆರೋಪದ ಮೇಲೆ ನಿಷೇಧಿತ ಸಿಖ್​ ಫಾರ್ ಜಸ್ಟೀಸ್ ಸಂಘಟನೆಯ ಮೂವರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಇದನ್ನೂ ಓದಿ:5 ರೂ. ಕುರ್ಕುರೆ ಪ್ಯಾಕೆಟ್ ತರದ ಗಂಡನಿಗೆ ಡಿವೋರ್ಸ್​​​ ಕೊಟ್ಟ ಪತ್ನಿ..!
ಗುಪ್ತಚರ ದಳದ ಘಟಕ ಹಾಗೂ ಬಠಿಂಡಾ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಈ ಮೂವರು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಹೇಳಿದ್ದಾರೆ. ಏಪ್ರಿಲ್ 27 ರಂದು ಬಠಿಂಡಾದಲ್ಲಿರುವ ಜಿಲ್ಲಾ ಆಡಳಿತ ಸಂಕೀರ್ಣ ಮತ್ತು ನ್ಯಾಯಾಲಯದ ಸಂಕೀರ್ಣದ ಗೋಡೆಗಳ ಮೇಲೆ ಖಾಲಿಸ್ತಾನ್ ಪರ ಘೋಷಣೆಗಳನ್ನು ಬರೆಯಲಾಗಿತ್ತು.
Punjab | Counter-Intelligence, Bathinda and Bathinda Police have arrested three SFJ operatives for writing Pro-Khalistan slogans at various public places including Bathinda, Punjab & Delhi, backed by New York-based mastermind Gurpatwant Pannu of Sikhs for Justice. On 27th April,…pic.twitter.com/H8ZgcMkxfa
— ANI (@ANI)May 14, 2024

ದೆಹಲಿಯಲ್ಲಿ ಕಂಡ ಖಲಿಸ್ತಾನ್ ಪರ ಘೋಷಣೆಗಳು:ಮೇ 9ರಂದು ಇದೇ ರೀತಿಯ ಘೋಷಣೆಗಳು ದೆಹಲಿಯ ಝಂಡೆವಾಲ್​ನ ಮತ್ತು ಕರೋಲ್​ ಬಾಗ್​ ಮೆಟ್ರೊ ನಿಲ್ದಾಣಗಳಲ್ಲೂ ಕಂಡು ಬಂದಿದ್ದವು.
ದೆಹಲಿ ಮೆಟ್ರೋ ನಿಲ್ದಾಣಗಳ ಕಂಬಗಳ ಮೇಲೆ ಖಲಿಸ್ತಾನ್ ಪರ ಘೋಷಣೆಗಳನ್ನು ಮತ್ತು ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಬರೆಯಲಾಗಿದೆ. ಕರೋಲ್ ಬಾಗ್ ಮತ್ತು ಝಾಂಡೇವಾಲನ್ ಮೆಟ್ರೋ ನಿಲ್ದಾಣಗಳಲ್ಲಿ ಈ ಘೋಷಣೆಗಳು ಕಂಡುಬಂದಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಯುನೈಟೆಡ್ ಸ್ಟೇಟ್ಸ್ ಮೂಲದ ನಿಷೇಧಿತ ಸಿಖ್ ಪ್ರತ್ಯೇಕತಾವಾದಿ ಗುಂಪು ನಿಷೇಧಿತ ಸಿಖ್​ ಫಾರ್ ಜಸ್ಟೀಸ್ ಸಂಘಟನೆಯವರು ಈ ಘೋಷಣೆಗಳನ್ನು ಬರೆದಿದ್ದಾರೆ ಎನ್ನಲಾಗಿದೆ. ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಅವರ ತನಿಖೆಗೆ ಸಹಾಯ ಮಾಡಲು ದೆಹಲಿ ಮೆಟ್ರೋ ಅಧಿಕಾರಿಗಳಿಂದ ಸಿಸಿಟಿವಿ ದೃಶ್ಯಗಳನ್ನು ಪಡೆದುಕೊಂಡಿದ್ದಾರೆ.
ಎಲ್​ಟಿಟಿಇ ಮೇಲಿನ ನಿಷೇಧ ಮತ್ತೆ ಐದು ವರ್ಷ ವಿಸ್ತರಣೆ ಕೇಂದ್ರ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + two =
Remember me
