ಕುಪ್ಪಂ:ವೃದ್ಧೆಯೊಬ್ಬಳ ಶವವನ್ನು ಹೊತ್ತೊಯ್ಯುತ್ತಿದ್ದ ವೇಳೆ ನಡೆದ ವಿದ್ಯುತ್ ಅವಘಡದಿಂದಾಗಿ ಮೂವರು ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಕುಪ್ಪಂನಲ್ಲಿ ನಡೆದಿದೆ.
ಇದನ್ನೂ ಓದಿ:ಕಾಂಗ್ರೆಸ್​ ಪಾಪ್ಯುಲಾರಿಟಿ ಸಹಿಸಲಾರದೆ ಬಿಜೆಪಿಯವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಚೆಲುವರಾಯಸ್ವಾಮಿ
ಮೃತರನ್ನು ಮುನೆಪ್ಪ, ತಿರುಪತಿ ಮತ್ತು ರವೀಂದ್ರನ್ ಎಂದು ಗುರುತಿಸಲಾಗಿದೆ. ಗ್ರಾಮದ ನಿವಾಸಿ ರಾಣೆಮ್ಮ ಎಂಬ ಮಹಿಳೆಯು ಶುಕ್ರವಾರದಂದು ಮರಣವನ್ನು ಹೊಂದಿದ್ದಳು. ಆಕೆಯ ಮೃತದೇಹವನ್ನು ಅಂತಿಮ ವಿಧಿ-ವಿಧಾನದಂತೆ ಸ್ಥಳೀಯ ಸ್ಮಶಾನಕ್ಕೆ ಹೊತ್ತೊಯ್ಯುಲಾಗುತ್ತಿತ್ತು. ಈ ವೇಳೆ ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ನಾಲ್ವರು ಹೈ-ಟೆನ್ಷನ್ ಎಲೆಕ್ಟ್ರಿಕ್ ಕೇಬಲ್‌ನ ಸಂಪರ್ಕಕ್ಕೆ ಬಂದು ವಿದ್ಯುತ್​ ಆಘಾತಕ್ಕೆ ಒಳಗಾಗಿದ್ದಾರೆ.
ನೋಡುನೋಡುತ್ತಿದ್ದಂತೆ ಮೂವರು ಸ್ಥಳದಲ್ಲಿಯೇ ಮರಣವನ್ನು ಹೊಂದಿದ್ದು, ಇನ್ನೊಬ್ಬ ತೀವ್ರವಾಗಿ ಗಾಯಗೊಂಡಿದ್ದಾನೆ. ಕಬ್ಬಿಣದ ಶವಪೆಟ್ಟಿಗೆಯ ಮೇಲ್ಬಾಗವು ಆಕಸ್ಮಿಕವಾಗಿ ವಿದ್ಯುತ್​ ತಂತಿಗೆ ತಗುಲಿ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ:ಶಾಸಕ ಪ್ರದೀಪ್ ಈಶ್ವರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಅಕೌಂಟ್ ತೆರೆದು ಜನರನ್ನು ವಂಚಿಸುತ್ತಿದ್ದ ವ್ಯಕ್ತಿ ಅರೆಸ್ಟ್…
ಘಟನೆಯ ನಂತರ, ಸ್ಥಳೀಯರು ವಿದ್ಯುತ್ ಇಲಾಖೆಯ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ವಿದ್ಯುತ್‌ ತಂತಿಗಳು ಇರುವ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
