ಗೊಲೆಪುಲ್ಲಿ:ಜಮ್ಮುವಿನ ಗೊಲೆಪುಲ್ಲಿ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲು ಅಗ್ನಿಶಾಮಕ ದಳ ಸ್ಥಳಕ್ಕೆ ಹೋದಾಗ ಕಟ್ಟಡ ಕುಸಿದು ಬಿದ್ದಿದೆ. ಬೆಂಕಿ ನಂದಿಸುತ್ತಿದ್ದ ಅಗ್ನಿಶಾಮಕ ದಳದ ಮೂವರು ಸಿಬ್ಬಂದಿಗಳು ಕಟ್ಟಡದ ಅವಶೇಷಗಳ ಅಡಿ ಸಿಲುಕಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇಂದು ಮುಂಜಾನೆ 3 ಗಂಟೆಯ ಹೊತ್ತಿಗೆ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ನೆಲ ಮಾಳಿಗೆಯಲ್ಲಿ ಮರಗಳನ್ನು ಕತ್ತರಿಸುವ ಕಾರ್ಖಾನೆಯಿದ್ದು, ಅಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದ್ದಾರೆ. ಬೆಂಕಿ ಬಿದ್ದ ಸಮಯದಲ್ಲಿ ಕಾರ್ಖಾನೆಯಲ್ಲಿ ಹಲವರು ಕೆಲಸ ಮಾಡುತ್ತಿದ್ದು ಅವರನ್ನು ರಕ್ಷಿಸಲು ಅಗ್ನಿಶಾಮಕ ದಳವು ಪ್ರಯತ್ನಿಸುತ್ತಿತ್ತು. ಇದೇ ಸಂದರ್ಭದಲ್ಲಿ ಕಟ್ಟಡ ಕುಸಿದು ಬಿದ್ದಿದೆ. ಹಲವು ನಾಗರಿಕರು ಸೇರಿದಂತೆ, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಟ್ಟಡದ ಅವಶೇಷಗಳ ಅಡಿ ಸಿಕ್ಕಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಇಬ್ಬರು ನಾಗರಿಕರು ಮತ್ತು ಒಬ್ಬ ಸಿಬ್ಬಂದಿಯನ್ನು ಅವಶೇಷಗಳಿಂದ ಹೊರತೆಗೆಯಲಾಗಿದ್ದು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಇನ್ನೂ ಮೂರು ಜನ ಸಿಬ್ಬಂದಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವುದಾಗಿ ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಇತರ ನಾಗರಿಕರೂ ಸಹ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆಯೇ ಎನ್ನುವುದು ತಕ್ಷಣಕ್ಕೆ ಸ್ಪಷ್ಟವಿಲ್ಲ ಎಂದು ಅವರು ತಿಳಿಸಿದ್ದಾರೆ.(ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − six =
Remember me
