ಬೆಂಗಳೂರು:ನೀರಾವರಿ ಕಾಲುವೆ ದುರಸ್ತಿ ಕಾರ್ಯ ನಾಲ್ಕಂತಸ್ತಿನ ಕಟ್ಟಡಕ್ಕೆ ಮುಳುವಾಗಿ ಪರಿಣಮಿಸಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಕಾಲುವೆಗೆ ಬಿದ್ದಿದೆ.
ನೀರಾವರಿ ಇಲಾಖೆಗೆ ಸೇರಿದ ಕಾಲುವೆಯ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಕಾಲುವೆಯನ್ನು ಸ್ವಚ್ಛಗೊಳಿಸುವುದು ಮಾತ್ರವಲ್ಲದೇ, ಹೂಳು ತೆಗೆಯುವ ಕೆಲಸವನ್ನು ನಡೆಸಲಾಗುತ್ತಿತ್ತು. ಇದರಿಂದ ಕಟ್ಟಡದ ಪಾಯ ದುರ್ಬಲಗೊಂಡಿತ್ತು ಎನ್ನಲಾಗಿದೆ.
ಇದನ್ನೂ ಓದಿ;ಮಹಿಳೆಯರಿಗಿನ್ನು ಹದಿನೆಂಟಲ್ಲ, ಮದುವೆ ವಯಸ್ಸು 21…!
ಕೆಲ ದಿನಗಳ ಹಿಂದೆ ಕಟ್ಟಡದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಹೀಗಾಗಿ, ಕಟ್ಟಡ ಯಾವುದೆ ಕ್ಷಣದಲ್ಲಾದರೂ ಕುಸಿಯಲಿದೆ ಎಂದೇ ನಿರೀಕ್ಷಿಸಲಾಗಿತ್ತು. ವೈರಲ್​ ಆಗಿರುವ 30 ಸೆಕೆಂಡ್​ಗಳ ವಿಡಿಯೋದಲ್ಲಿ ಕಟ್ಟಡ ಧರಾಶಾಯಿಯಾಗುವುದು ಸೆರೆಯಾಗಿದೆ.
ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮಾಲೀಕ ನೇಮಾಯ್​ ಸಮಂಥ, ತನಗೆ ಭಾರಿ ನಷ್ಟ ಸಂಭವಿಸಿದೆ ಎಂದು ಅಳಲು ತೋಡಿಕೊಂಡಿದ್ದಾನೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸದಿರುವುದು ಸಮಾಧಾನಕರ ಸಂಗತಿ ಎಂದಿದ್ದಾನೆ
ಇದನ್ನೂ ಓದಿ;80 ವರ್ಷಗಳಲ್ಲಿ ಆಗದ್ದು ಮೂರೇ ತಿಂಗಳಲ್ಲಿ ಸಾಧ್ಯವಾಯ್ತು; ಎಲ್ಲವೂ ಲಾಕ್​ಡೌನ್​ ಮಹಿಮೆ
ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ನಿಶ್ಚಿಂತಪುರ ಎಂಬಲ್ಲಿನ ಘಟನೆ ಇದಾಗಿದೆ. ಜತೆಗೆ, ರಾಜ್ಯ ನೀರಾವರಿ ಇಲಾಖೆ ಕಾಲುವೆ ಕಾಮಗಾರಿ ನಡೆಸುತ್ತಿತ್ತು.
ಜೂನ್​ 15ರಿಂದ ಮತ್ತೊಮ್ಮೆ ದೇಶಾದ್ಯಂತ ಸಂಪೂರ್ಣ ಲಾಕ್​ಡೌನ್​ ; ಇಲ್ಲಿದೆ ಫ್ಯಾಕ್ಟ್​ಚೆಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
