ಶ್ರೀನಗರ:ಇಂದು ಮುಂಜಾನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಟೋಲ್​ ಪ್ಲಾಜಾದ ಬಳಿ ಪೊಲೀಸರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸರ ಗುಂಡೇಟಿಗೆ ಮೂವರು ಉಗ್ರರು ಹತರಾಗಿರುವುದು ವರದಿಯಾಗಿದೆ.
ಇಂದು ಮುಂಜಾನೆ ಸ್ಥಳೀಯ ಪೊಲೀಸರು ಮತ್ತು ಸಿಪಿಆರ್​ಎಫ್​ ತಂಡದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ತಪಾಸಣೆಯನ್ನು ನಡೆಸಲಾಗುತ್ತಿತ್ತು. 5 ಗಂಟೆಯ ಸಮಯಕ್ಕೆ ಟೋಲ್​ ಪ್ಲಾಜಾದ ಬಳಿ ತಪಾಸಣೆ ನಡೆಸುತ್ತಿರುವಾಗ ಅಲ್ಲಿಗೆ ಬಂದ ಲಾರಿಯೊಂದರಲ್ಲಿದ್ದ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದಾಗಿ ಓರ್ವ ಪೊಲೀಸ್​ ಸಿಬ್ಬಂದಿಗೆ ಗಾಯಗಳಾಗಿದೆ. ತಕ್ಷಣವೇ ಪೊಲೀಸರು ಉಗ್ರರ ಮೇಲೆ ಗುಂಡನ್ನು ಹಾರಿಸಿದ್ದಾರೆ. ಮೂರರಿಂದ ನಾಲ್ಕು ಉಗ್ರರು ಗಾಡಿಯಲ್ಲಿದ್ದಿರುವುದಾಗಿ ತಿಳಿದುಬಂದಿದ್ದು, ಸ್ಥಳದಲ್ಲೇ ಮೂವರು ಉಗ್ರರು ಮೃತ ಪಟ್ಟಿರುವುದಾಗಿ ಜಮ್ಮು ಕಾಶ್ಮೀರದ ಡಿಜಿಪಿ ದಿಲ್​ಬಾಗ್​ ಸಿಂಗ್​ ತಿಳಿಸಿದ್ದಾರೆ. ಒಬ್ಬ ಉಗ್ರ ತಪ್ಪಿಸಿಕೊಂಡಿದ್ದು ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಗಾಡಿಯಲ್ಲಿ ನಾಲ್ಕು ಬಂದೂಕುಗಳಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಒಂದು ಎಕೆ 47 ಹಾಗೂ ಅನೇಕ ಗ್ರೆನೇಡ್​ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಿಲ್​ಬಾಗ್​ ಸಿಂಗ್​ ನೀಡಿರುವ ಮಾಹಿತಿಯ ಪ್ರಕಾರ ಈ ಉಗ್ರರು ಅಕ್ರಮ ನುಸುಳುಕೋರರ ಗುಂಪಿಗೆ ಸೇರಿದವರಾಗಿದ್ದು, ಹರಿನಗರದಿಂದ ಶ್ರೀನಗರದತ್ತ ಪ್ರಯಣ ಬೆಳೆಸುತ್ತಿದ್ದರು ಎನ್ನಲಾಗಿದೆ.
ದಾಳಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಗಂಟೆಗಳ ಕಾಲ ಟ್ರಾಫಿಕ್​ ಸಮಸ್ಯೆ ಉಂಟಾಗಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
