ಕೋಲ್ಕತ್ತಾ:ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ರಕ್ತ ಹರಿದಿದ್ದು, ಜನನಿಬಿಡ ಪ್ರದೇಶದಲ್ಲಿಯೇ ಟಿಎಂಸಿ ಮುಖಂಡ ಹಾಗೂ ಇಬ್ಬರು ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಗುರುವಾರ ಬೆಳಗ್ಗೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಗೋಪಾಲಪುರ ಗ್ರಾಮ ಪಂಚಾಯತ್ ಸದಸ್ಯ ಸ್ವಪನ್ ಮಾಝಿ ಅವರು ಗುರುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಭೆಗೆ ತೆರಳುತ್ತಿದ್ದಾಗ ಹಂತಕರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ವೇಳೆ ಪರಾರಿಯಾಗುತ್ತಿದ್ದ ಟಿಎಂಸಿ ನಾಯಕನ ಜೊತೆ ಇದ್ದ ಇಬ್ಬರು ಕಾರ್ಯಕರ್ತರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮೋಟಾರ್​ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳಿಂದ ಈ ಹತ್ಯೆ ನಡೆದಿದೆ. ಈ ದಾಳಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ, ತನಿಖೆ ಬಳಿಕವೇ ಸತ್ಯ ಹೊರಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − seven =
Remember me
