ಬೆಂಗಳೂರು:ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್​​ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧನವಾಗುತ್ತಿದ್ದಂತೆ,  ಈ ಪ್ರಕರಣದಲ್ಲಿ ಸಿಲುಕೊಂಡಿರುವ ಜಗ್ಗೇಶ್​​​ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಅಧಿಕಾರಿಗಳ ಈ ಕ್ರಮವನ್ನು ಪ್ರಶ್ನೆ ಮಾಡಿ ಕೋರ್ಟ್​​ ಮೊರೆ ಹೋಗಿದ್ದರು. ಇದೀಗ  ಕೋರ್ಟ್​​ ಜಗ್ಗೇಶ್​​ ಪರವಾಗಿ ಬ್ಯಾಟ್​​ ಬಿಸಿದೆ.

ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಜಗ್ಗೇಶ್ ಪರವಾಗಿ ಕೋರ್ಟ್​ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.
ಏನಿದು ಪ್ರಕರಣ?:ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್​ನ ಗಿಫ್ಟ್ ಆಗಿ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.
ಕೋರ್ಟ್​ಗೆ ಜಗ್ಗೇಶ್ ಮನವಿ :‘ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದು ಪಡಿಸಬೇಕು. ನೋಟಿಸ್​​ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು’ ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.
ಕೋರ್ಟ್​​ ಹೇಳಿದ್ದೇನು?:ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ತೊಂದರೆ ಅನುಭವಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳಿಂದ ಜಗ್ಗೇಶ್​ಗೆ ನೋಟಿಸ್ ಕೂಡ ನೀಡಲಾಗಿತ್ತು. ಇದಕ್ಕೆ ತಡೆನೀಡಬೇಕು ಎಂದು ಜಗ್ಗೇಶ್ ಅವರು ಹೈಕೋರ್ಟ್​ ಮೆಟ್ಟಿಲು ಏರಿದ್ದರು. ಜಗ್ಗೇಶ್ ಪರವಾಗಿ ಕೋರ್ಟ್​ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಜಗ್ಗೇಶ್​ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ:ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.
Tiger Claw Case: ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್​​ ಮೊರೆಹೋದ ನಟ ಜಗ್ಗೇಶ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + five =
Remember me
