ಬೆಂಗಳೂರು:ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರತಿ ರಾಮನವಮಿಯಂದು ಸೂರ್ಯ ತಿಲಕ ಇಡಲು ನೆರವಾಗುವ ಆಪ್ಟಿಕಲ್‌ ಯಂತ್ರವನ್ನು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ಹಾಗೂ ಜೈನ ಕುಟುಂಬದ ಮಾಲೀಕತ್ವದಲ್ಲಿರುವ ಬೆಂಗಳೂರು ಮೂಲದ ಕಂಪನಿ ದಾನವಾಗಿ ನೀಡಿದೆ.
ಇದನ್ನೂ ಓದಿ:ಶ್ರೀರಾಮ ಮಂದಿರದ ಮಂತ್ರಾಕ್ಷತೆ ವಿತರಣೆ
ಶ್ರೀರಾಮಚಂದ್ರ ದೇವರ ಜನ್ಮದಿನವಾದ ಪ್ರತಿ ರಾಮ ನವಮಿಗೆ ಈ ಯಂತ್ರದ ಸಹಾಯದಿಂದ ಗರ್ಭಗುಡಿಯ ಒಳಗೆ ಶ್ರೀರಾಮ ವಿಗ್ರಹದ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲು ಸಾಧ್ಯವಾಗುತ್ತದೆ. ಆ ದಿನ 3-4 ನಿಮಿಷ ಈ ಯಂತ್ರದ ಸಹಾಯದಿಂದ ಸೂರ್ಯ ರಶ್ಮಿಯನ್ನು ವಿಗ್ರಹದ ಹಣೆಗೆ ಇಡಲು ಸಾಧ್ಯವಾಗಲಿದೆ. 84 ಲಕ್ಷ ರೂಪಾಯಿ ವೆಚ್ಚದ ಈ ಯಂತ್ರವನ್ನು ಆಪ್ಟಿಕ್ಸ್‌ & ಅಲೈಡ್‌ ಇಂಜಿನಿಯರಿಂಗ್‌ ಪ್ರೈವೇಟ್‌ ಲಿಮಿಟೆಡ್‌ (ಆಪ್ಟಿಕಾ) ನಿರ್ಮಾಣ ಮಾಡಿದೆ. ಜಿಗಣಿ ಲಿಂಕ್‌ ರೋಡ್‌ನಲ್ಲಿರುವ ಈ ಕಂಪನಿ, ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಆಸ್ಟ್ರೋಫಿಸಿಕ್ಸ್‌ ಮತ್ತು ಸೆಂಟ್ರಲ್‌ ಬಿಲ್ಡಿಂಗ್‌ ರಿಸರ್ಚ್‌ ಇನ್ಸ್‌ಟಿಟ್ಯೂಟ್‌ (ಸಿಬಿಆರ್‌ಐ) ನಿಂದ ಯಂತ್ರ ನಿರ್ಮಾಣಕ್ಕಾಗಿ ಸಹಾಯ ಪಡೆದುಕೊಂಡಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಮನವಿಯ ಮೇರೆಗೆ ಯಂತ್ರ ಒದಗಿಸಲಾಗಿದೆ.
ರಾಮ ನವಮಿಯ ದಿನ ಸೂರ್ಯ ಒಂದು ನಿರ್ದಿಷ್ಟ ಕೋನದಲ್ಲಿದ್ದಾಗ ಪೆರಿಸ್ಕೋಪಿಕ್ ವ್ಯವಸ್ಥೆಯಲ್ಲಿ ಮೊದಲ ಕನ್ನಡಿ ಸೂರ್ಯನ ಬೆಳಕನ್ನು ಪಡೆಯಲಿದೆ. ಈ ಯಂತ್ರವು ಸೂರ್ಯನ ಬೆಳಕನ್ನು ಸೆರೆಹಿಡಿಯುವುದು ಮಾತ್ರವಲ್ಲದೇ, ಸ್ವಯಂಚಾಲಿತವಾಗಿ ಹೊಂದಿಕೊಂಡು, ಪ್ರತಿ ರಾಮನವಮಿಯ ದಿನ ರಾಮನ ವಿಗ್ರಹದ ಹಣೆಯ ಮೇಲೆ ನಿಖರವಾಗಿ ಸೂರ್ಯ ತಿಲಕ ಇಡಲು ನಿರ್ಮಿಸಲಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (ಐಐಎ) ಮೂಲಗಳು ತಿಳಿಸಿವೆ.
ಸದ್ಭಾವನೆಯಿಂದ ಅತ್ಯಂತ ನಿಖರವಾದ ಆಪ್ಟಿಕಲ್ ಯಂತ್ರವನ್ನು ನಿರ್ಮಾಣ ಮಾಡಲಾಗಿದೆ. 500 ವರ್ಷದ ಬಳಿಕ ರಾಮ ಲಲ್ಲಾ ವಾಪಾಸ್‌ ಮಂದಿರಕ್ಕೆ ಬರುತ್ತಿದ್ದು, ಪ್ರಧಾನ ಮಂತ್ರಿಗಳ ವಿಷನ್‌ ಹಾಗೂ ದೇವಸ್ಥಾನದ ಟ್ರಸ್ಟ್‌ ಹಾಗೂ ನನ್ನ ಸಂಪೂರ್ಣ ತೃಪ್ತಿಯಿಂದ ಈ ಪ್ರಾಜೆಕ್ಟ್‌ಗೆ ಬೆಂಬಲ ನೀಡಿದ್ದೇನೆ ಎಂದು ಆಪ್ಟಿಕಾ ಮ್ಯಾನೇಜಿಂಗ್ ಡೈರೆಕ್ಟರ್ ರಾಜೇಂದ್ರ ಕೊಟಾರಿಯಾ ತಿಳಿಸಿದ್ದಾರೆ.ಕಳೆದ ನಾಲ್ಕು ತಿಂಗಳಿನಿಂದ ಈ ಯಂತ್ರದ ಕೆಲಸ ನಡೆಯುತ್ತಿತ್ತು. ದೇವಸ್ಥಾನದಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆಯ ದಿನವೇ ಈ ಯಂತ್ರವೂ ಅನಾವರಣಗೊಳ್ಳಲಿದೆ. ಪೆರಿಸ್ಕೋಪ್‌ ರೀತಿಯಲ್ಲಿ ಈ ಯಂತ್ರ ಕೆಲಸ ಮಾಡಲಿದ್ದು, ಟಿಟಾನಿಯಂ, ಹಿತ್ತಾಳೆ ಮತ್ತು ಕಂಚು ಬಳಸಿ ನಿರ್ಮಾಣ ಮಾಡಲಾಗಿದೆ. ದೇವಸ್ಥಾನದ ನಿರ್ಮಾಣದಲ್ಲಿ ಕಬ್ಬಿಣ ನಿಷಿದ್ಧವಾಗಿರುವ ಕಾರಣ ಅದನ್ನು ಎಲ್ಲೂ ಬಳಸಲಾಗಿಲ್ಲ ಎಂದಿದ್ದಾರೆ.ರಾಮ ಪ್ರತಿಯೊಬ್ಬರಿಗೂ ಸೇರಿದವನು. ರಾಮನ ತತ್ವಗಳು ದಾನವನ್ನು ಆಧರಿಸಿವೆ. ನಮ್ಮ ಜೈನ ಧರ್ಮದ ಸಿದ್ಧಾಂತವೂ ದಾನದಿಂದ ಪ್ರೇರಿತವಾಗಿದೆ. ಆದ್ದರಿಂದ ಎರಡೂ ಧರ್ಮದ ಮೂಲ ಒಂದೇ ಆಗಿದೆ ಎಂದು ಅವರು ಹೇಳಿದ್ದಾರೆ.
ಭಾರತದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ: ಗೋದಾವರಿ ದಡದ ರಾಮಮಂದಿರಕ್ಕೆ ಭೇಟಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 5 =
Remember me
