Tirupati – Prime Minister Narendra Modi had darshan at Tirumala Sri Venkateswara Temple. He has
ತಿರುಪತಿ:“ಕಲಿಯುಗ ವೈಕುಂಠ ತಿರುಮಲೆಯ ಶ್ರೀವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ 140 ಕೋಟಿ ಭಾರತೀಯರ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಲಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.
Om Namo Venkatesaya… 🙏pic.twitter.com/9mDOFHe9GD
— The Random Guy (@RandomTheGuy_)November 27, 2023

ಇದನ್ನೂ ಓದಿ :ಬೆಂಗಳೂರು “ರಾಜ-ಮಹಾರಾಜ” ಜೋಡುಕರೆ ಕಂಬಳ ಕೂಟದ ಫಲಿತಾoಶ ಪಟ್ಟಿ ಇಲ್ಲಿದೆ ನೋಡಿಪ್ರಧಾನಿ ಮೋದಿ ಅವರು ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ವಿಶ್ವವಿಖ್ಯಾತ ತಿರುಮಲೆ ಬೆಟ್ಟದ ಮೇಲಿರುವ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದು, ದೇಶದ ಸಮಗ್ರ ನಾಗರಿಕರ ಕ್ಷೇಮ ಬಯಸಿ ಭಗವಂತನಲ್ಲಿ ಬೇಡಿಕೊಂಡಿರುವುದಾಗಿ ಬಳಿಕ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.
Om Namo Venkatesaya!
Some more glimpses from Tirumala.pic.twitter.com/WUaJ9cGMlH
— Narendra Modi (@narendramodi)November 27, 2023

ಇದೇ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಮೋದಿಯವರಿಗೆ ವೈದಿಕ ಆಶೀರ್ವಾದ ನೀಡಿದರು. ಭಾನುವಾರ ರಾತ್ರಿಯೇ ಪ್ರಧಾನಿ ತಿರುಮಲಕ್ಕೆ ಆಗಮಿಸಿದ್ದು, ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ರೆನಿಗಿಂಟಾ ವಿಮಾನ ನಿಲ್ದಾಣದಲ್ಲಿ ಹಾಜರಿದ್ದು, ಪ್ರಧಾನಿಯವರನ್ನು ಸ್ವಾಗತಿಸಿದ್ದರು.
ತಿರುಪತಿ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ತಿರುಮಲ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಂಪು ಹಾಸಿನ ಸ್ವಾಗತ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ತಿರುಪತಿ-ತಿರುಮಲ ದೇಗುಲದ ಸಂಕೀರ್ಣದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿತ್ತು.
ದೇವಾಲಯ ದರ್ಶನಕ್ಕೂ ಮುನ್ನ ತೆಲಂಗಾಣದ ಹೈದರಾಬಾದ್‌ ಬಳಿಯ ಪರಿಸರ ಸಂರಕ್ಷಣೆ ಮತ್ತು ಯೋಗಕ್ಷೇಮ ಕೇಂದ್ರವಾದ ಕನ್ಹಾ ಶಾಂತಿ ವನಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪಶುಪತಿನಾಥ ದೇವಾಲಯದ ಪ್ರತಿಕೃತಿ ಭಾರತದಲ್ಲಿ ನಿರ್ಮಿಸಲು ಅನುಮತಿ; ಸುದ್ದಿ ನಿರಾಕರಿಸಿದ ನೇಪಾಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − four =
Remember me
