ಕೋಲ್ಕತ:ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಉಪಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಜುಲೈ 10ರಂದು ಮತದಾನ ನಡೆಯಲಿರುವ ನಾಲ್ಕು ಸ್ಥಾನಗಳಿಗೆ ಟಿಎಂಸಿ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ.
ಇದನ್ನು ಓದಿ:NEET-UG ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಅರ್ಜಿ; ಉತ್ತರ ಕೇಳಿ ಎನ್​ಟಿಎಗೆ ಸುಪ್ರೀಂ ನೋಟಿಸ್​​
ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷವು ರಾಯಗಂಜ್ ಕ್ಷೇತ್ರದಿಂದ ಕೃಷ್ಣ ಕಲ್ಯಾಣಿ ಮತ್ತು ರಾಣಾಘಾಟ್-ದಕ್ಷಿಣ್ ಕ್ಷೇತ್ರದಿಂದ ಮುಕುತ್ ಮಣಿ ಅಧಿಕಾರಿ, ಕೋಲ್ಕತ್ತಾದ ಮಾಣಿಕ್ತಾಲಾ ಕ್ಷೇತ್ರದಿಂದ ಸುಪ್ತಿ ಪಾಂಡೆ ಹಾಗೂ ಬಾಗ್ಡಾ ಕ್ಷೇತ್ರದಿಂದ ಮಧುಪರ್ಣ ಠಾಕೂರ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಬಿಜೆಪಿ ತೊರೆದು ಟಿಎಂಸಿಗೆ ಸೇರ್ಪಡೆಯಾದ ಶಾಸಕರಾದ ಕಲ್ಯಾಣಿ, ಮುಕುತ್ ಮಣಿ ಇಬ್ಬರು ಲೋಕಸಭೆ ಚುನಾವಣೆಯಲ್ಲಿ ವಿಫಲವಾದ ನಂತರ ರಾಯ್‌ಗಂಜ್ ಮತ್ತು ರಾಣಾಘಾಟ್ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಅಗತ್ಯವಾಗಿತ್ತು. ಸಾಧನ್ ಪಾಂಡೆ ಅವರು 2022ರಲ್ಲಿ ವಿಧಿವಶರಾದ ನಂತರ ಮಾಣಿಕ್ತಾಲಾ ಸ್ಥಾನವು ತೆರವಾಗಿತ್ತು. ಈ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದೆ.
ವಿಧಾನಸಭಾ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ (ಇಸಿಐ) ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಸಿಬ್ಬಂದಿಯ ನಿಯೋಜನೆಯನ್ನು ಇಸಿಐ ಘೋಷಿಸಿದೆ. ಇದರಲ್ಲಿ ಉತ್ತರ 24 ಪರಗಣ ಜಿಲ್ಲೆಯ ಬಾಗ್ಡಾದಲ್ಲಿ ಗರಿಷ್ಠ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಜೂನ್ 21 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಜೂನ್ 26 ಕೊನೆಯ ದಿನವಾಗಿದೆ. ಜುಲೈ 13ರಂದು ಮತ ಎಣಿಕೆ ನಡೆಯಲಿದೆ. (ಏಜೆನ್ಸೀಸ್​​)
ಕುವೈತ್​ ಅಗ್ನಿ ಅವಘಡ; 45 ಮೃತದೇಹಗಳೊಂದಿಗೆ ಭಾರತಕ್ಕೆ ಬಂದಿಳಿದ ವಿಮಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
