
ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಎಲ್ಲಾ 42 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅದರ ಸದಸ್ಯ ಟಿಎಂಸಿ ಪ್ರಕಟಿಸಿದ್ದರಿಂದ INIDA ಮೈತ್ರಿಕೂಟಕ್ಕೆ ಹೊಡೆತ ಬಿದ್ದಂತಾಗಿದೆ. ಟಿಎಂಸಿ ಪಟ್ಟಿಯನ್ನು ಪರೋಕ್ಷವಾಗಿ ಉಲ್ಲೇಖಿಸಿದ ಕಾಂಗ್ರೆಸ್, ಎರಡು ಪಕ್ಷಗಳ ನಡುವೆ ಪರಸ್ಪರ ಗೌರವಾನ್ವಿತ ಸ್ಥಾನ ಹಂಚಿಕೆಯನ್ನು ಹೊಂದುವ ತನ್ನ ಬಲವಾದ ಬಯಕೆಯನ್ನು ವ್ಯಕ್ತಪಡಿಸಿದೆ.
ಇದನ್ನೂ ಓದಿ:ಸೌದಿಯಲ್ಲಿ ಹೈದರಾಬಾದಿ ಪತ್ನಿ ಮೇಲೆ ಪಾಕ್​ ವ್ಯಕ್ತಿ ಹಲ್ಲೆ: ರಕ್ಷಣೆಗಾಗಿ ವಿದೇಶಾಂಗ ಸಚಿವಾಲಯ ಮೊರೆ ಹೋದ ಕುಟುಂಬ
ಟಿಎಂಸಿ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು ರಾಜ್ಯದ ಎಲ್ಲಾ 42 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲು ನಿರ್ಧರಿಸಿದೆ ಎಂದು ಈ ಹಿಂದೆ ಘೋಷಿಸಿದ್ದರು. ಅದರಂತೆಯೇ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಪಶ್ಚಿಮ ಬಂಗಾಳದ ಎಲ್ಲಾ ಸ್ಥಾನಗಳಿಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಮಾಡಿದರು.
ಇದು ದೇಶಾದ್ಯಂತ ಅನೇಕ ಇತರ ಪಕ್ಷಗಳೊಂದಿಗೆ INIDA ಮೈತ್ರಿಕೂಟದ ಜತೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿಯಲು ಹೆಣಗಾಡುತ್ತಿರುವ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಕಾಂಗ್ರೆಸ್ ನಾಯಕರು ಒಪ್ಪಂದ ಮಾಡಿಕೊಳ್ಳುತ್ತೇವೆ ಎಂದು ಹೇಳುತ್ತಿರುವಾಗಲೇ ಟಿಎಂಸಿ ಪಟ್ಟಿ ಬಂದಿದೆ.
ಪಶ್ಚಿಮ ಬಂಗಾಳಕ್ಕೆ ತನ್ನ ಪಟ್ಟಿಯನ್ನು ಪ್ರಕಟಿಸುವ ಮೊದಲು INIDA ಕೋಟದ ಪಾಲುದಾರರನ್ನು ಸಂಪರ್ಕಿಸಲು ಟಿಎಂಸಿ ಕಾಳಜಿ ವಹಿಸದಿದ್ದರೂ, ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವವರೆಗೂ ಮೈತ್ರಿ ನಿರೀಕ್ಷೆಗಳು ತೆರೆದಿರುತ್ತವೆ ಎಂಬ ಭರವಸೆಯನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಮಪತ್ರ ಹಿಂಪಡೆಯುವ ಮೊದಲು ತಮ್ಮ ಮೈತ್ರಿ ಯಾವಾಗ ಬೇಕಾದರೂ ಆಗಬಹುದು ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ X( ಹಿಂದಿನ ಟ್ವಿಟ್ಟರ್)ನಲ್ಲಿ “ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯೊಂದಿಗೆ ಗೌರವಾನ್ವಿತ ಸೀಟು ಹಂಚಿಕೆ ಒಪ್ಪಂದವನ್ನು ಹೊಂದಲು ಪದೇ ಪದೇ ಇಚ್ಚೆ ವ್ಯಕ್ತಪಡಿಸಿದ್ದೇವೆ. ಬಿಜೆಪಿ ವಿರುದ್ಧ ಒಟ್ಟಾಗಿ ಹೋರಾಡಲು ಕಾಂಗ್ರೆಸ್​ ಯಾವಾಗಲೂ ಬಯಸುತ್ತದೆ ಎಂದು ಜೈರಾಮ್ ರಮೇಶ್ ಟ್ವೀಟ್​ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ಮತ್ತು ಟಿಎಂಸಿ ನಾಯಕರು ಇತ್ತೀಚಿನ ದಿನಗಳಲ್ಲಿ ಮಾತಿನ ಸಮರದಲ್ಲಿ ತೊಡಗಿದ್ದರು, ಕಾಂಗ್ರೆಸ್‌ಗೆ ಎರಡಕ್ಕಿಂತ ಹೆಚ್ಚು ಸ್ಥಾನಗಳನ್ನು ನೀಡಲು ಸಾಧ್ಯವಿಲ್ಲ ಎಂದು ಟಿಎಂಸಿ ಪ್ರತಿಪಾದಿಸಿತ್ತು. ಕಾಂಗ್ರೆಸ್ ಪಶ್ಚಿಮ ಬಂಗಾಳದಿಂದ ಇಬ್ಬರು ಸಂಸದರನ್ನು ಹೊಂದಿದೆ.
miss-world-2024: ಮಿಸ್​ ವರ್ಲ್ಡ್ ಕಿರೀಟಕ್ಕೆ ಕನ್ನಡತಿ ಜಸ್ಟ್​ ಮಿಸ್​!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 + 1 =
Remember me
