ನವದೆಹಲಿ:ರಾಷ್ಟ್ರವ್ಯಾಪಿ ತೀವ್ರ ಸದ್ದು ಮಾಡಿರುವ ಆರ್​. ಜಿ. ಕರ್​ ಮಡಿಕಲ್​ ಕಾಲೇಜು ಮತ್ತು ಆಸ್ಪತ್ರೆಯ ಟ್ರೈನಿ ವೈದ್ಯೆ ಹತ್ಯೆ ಪ್ರಕರಣ ಬಿಜೆಪಿ ಹಾಗೂ ಟಿಎಂಸಿ ನಡುವಿನ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದ್ದು, ಸಿಬಿಐ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಇದೀಗ ಮಹತ್ವದ ಬೆಳವಣಿಗೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ರಾಜ್ಯಸಭಾ ಸದಸ್ಯರೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಜಿ ಐಎಎಸ್​ ಅಧಿಕಾರಿ, ಟಿಎಂಸಿ ಸಂಸದ (ರಾಜ್ಯಸಭಾ) ಜವಾಜವಾಹರ್ ಸಿರ್ಕಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ,ಅವರಿಗೆ ರಾಜೀನಾಮೆ ಪತ್ರವನ್ನು ಬರೆದಿದ್ದು, ರಾಜ್ಯವನ್ನು ಉಳಿಸಲು ಏನಾದರೂ ಮಾಡಿ ಎಂದು ಆಗ್ರಹಿಸಿದ್ದಾರೆ.
#BIGBREAKINGNEWSTMC MP & Ex-IAS Jawhar Sircar is resigning from MP post and quitting politics!His letter to CM, WB.Issue : R G Karpic.twitter.com/CSc428X0Az
ಇದನ್ನೂ ಓದಿ:ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಮೊಯಿನ್​ ಅಲಿ
ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ನೋಡಿದಾಗ ನನ್ನ ಪ್ರಕಾರ ಸರ್ಕಾರವು ಸರಿಯಾದ ಅಥವಾ ವಾಸ್ತವಿಕವಾದದ್ದನ್ನು ಹೇಳಿದಾಗಲೂ ಅಂತಹ ಆತಂಕ ಮತ್ತು ಸಂಪೂರ್ಣ ವಿಶ್ವಾಸದ ಕೊರತೆಯನ್ನು ನಾನು ಈವರೆಗೆ ನೋಡಿಲ್ಲ. ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಭೀಕರ ಘಟನೆಯಿಂದ ಒಂದು ತಿಂಗಳ ಕಾಲ ನಾನು ತಾಳ್ಮೆಯಿಂದ ಎದುರು ನೋಡಿದೆ. ಸರ್ಕಾರ ಯಾವುದೇ ಕ್ರಮವನ್ನು ತೆಗೆದುಕೊಳ್ಳಲಿಲ್ಲ.
ಸರ್ಕಾರ ಕೂಡಲೇ ಈ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಂಡು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪರಿಸ್ತಿತಿ ಕೈ ಮೀರಬಹುದು ಎಂದು ಮಮತಾ ಬ್ಯಾನರ್ಜಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 8 =
Remember me
