ಕೋಲ್ಕತ:ತಾನೊಬ್ಬ ಐಎಎಸ್​ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನಡೆಸಿದ್ದ ನಕಲಿ ಕರೊನಾ ಲಸಿಕೆ ಅಭಿಯಾನದಲ್ಲಿ ಪಾಲ್ಗೊಂಡು ಲಸಿಕೆ ಪಡೆದುಕೊಂಡಿದ್ದ ಟಿಎಂಸಿ ಸಂಸದೆ ಹಾಗೂ ನಟಿ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.
ಮಿಮಿ ಚಕ್ರವರ್ತಿ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ರಕ್ತದೊತ್ತಡ ಕಡಿಮೆಯಾಗಿರುವುದಾಗಿ ಹೇಳಲಾಗಿದೆ. ಡಿಹೈಡ್ರೇಷನ್ ಇಂದ ಬಳಲುತ್ತಿರುವ ಅವರು ಅನಾರೋಗ್ಯಕ್ಕೆ ತುತ್ತಾಗುವುದಕ್ಕೆ ಕಾರಣ ನಕಲಿ ಕರೊನಾ ಲಸಿಕೆಯೇ ಎಂದು ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿರುವುದಾಗಿ ತಿಳಿಸಲಾಗಿದೆ.
ಅವರು ಈ ಹಿಂದೆ ಪಿತ್ತಕೋಶ ಮತ್ತು ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು ಎನ್ನುವುದನ್ನು ತಿಳಿಸಲಾಗಿದೆ.ಕೋಲ್ಕತದಲ್ಲಿ ಐಎಎಸ್​ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ಡೆಬಂಜನ್ ದೇಬ್ ಹೆಸರಿನ ವ್ಯಕ್ತಿಯೊಬ್ಬ ಲಸಿಕಾ ಅಭಿಯಾನಗಳನ್ನು ನಡೆಸಿದ್ದ. ಆತನನ್ನು ಪೊಲೀಸರು ಬುಧವಾರದಂದು ಬಂಧಿಸಿದ್ದಾರೆ. (ಏಜೆನ್ಸೀಸ್)
ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
