ಕೊಲ್ಕತ:ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ತಿಂಗಳುಗಳು ಬಾಕಿಯಿರುವಾಗಲೇ ಹಿಂಸಾಚಾರದ ಪ್ರಕರಣಗಳು ಹೆಚ್ಚಾಗಲಾರಂಭಿಸಿವೆ. ಶನಿವಾರ ಮಧ್ಯ ರಾತ್ರಿ ಸಮಯದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಮನೆಗೆ ಟಿಎಂಸಿ ಕಾರ್ಯಕರ್ತರು ನುಗ್ಗಿದ್ದು, ಅಮ್ಮ ಮಗನ ಮೇಲೆ ಹಲ್ಲೆ ಮಾಡಿದ್ದಾರೆ.
ಡುಮ್ಡಮ್​ನ ನಿಮ್ಟಾದಲ್ಲಿರುವ ಮಸುಂದಾರ್ ಹೆಸರಿನ ಬಿಜೆಪಿ ಕಾರ್ಯಕರ್ತನ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಮಧ್ಯ ರಾತ್ರಿ ಸುಮಾರು 1.30ರ ಸಮಯಕ್ಕೆ ಟಿಎಂಸಿಯ ಕಾರ್ಯಕರ್ತರು ನಮ್ಮ ಮನೆಗೆ ನುಗ್ಗಿದರು. ನನ್ನ ಮೇಲೆ ಮತ್ತು ನನ್ನ ತಾಯಿಯ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದರು ಎಂದು ಮಸುಂದಾರ್​ ಅವರು ತಿಳಿಸಿದ್ದಾರೆ.
ಮಸುಂದಾರ್​ ಅವರ ತಲೆಗೆ ಬಲವಾಗಿ ಏಟು ಬಿದ್ದಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ


‘ಉತ್ತರ ಪ್ರದೇಶದಲ್ಲಿ 350 ಸೀಟು ಗೆದ್ದೇ ಗೆಲ್ಲುತ್ತೇವೆ’

ಆನ್​ಲೈನ್​ ರಮ್ಮಿ ಆಟಕ್ಕೆ ಬ್ರೇಕ್​! ಇನ್ನು ಮುಂದೆ ಈ ರಾಜ್ಯದಲ್ಲಿ ಆನ್​ಲೈನ್​ ಜೂಜಾಡುವಂತಿಲ್ಲ

‘ಧೈರ್ಯವಿದ್ದರೆ ಕಿಸಾನ್​ ಬಾತ್​, ಜಾಬ್​ ಕಿ ಬಾತ್​ ಮಾಡಿ’ ಮೋದಿಗೆ ಸವಾಲೆಸೆದ ರಾಹುಲ್​ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + nine =
Remember me
